ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮಕ್ಕಳ ಹಕ್ಕುಗಳ ಪರಾಮರ್ಶೆ

Last Updated 29 ಜನವರಿ 2015, 8:55 IST
ಅಕ್ಷರ ಗಾತ್ರ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ‘ಮಕ್ಕಳ ಹಕ್ಕುಗಳ ಪರಾಮರ್ಶೆ’ ಕಾರ್ಯಕ್ರಮವನ್ನು ಜಿಲ್ಲಾ ಪಂಚಾ­ಯಿತಿ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ ಇತ್ತೀಚೆಗೆ ಉದ್ಘಾಟಿಸಿದರು.

ಜನಸಮುದಾಯವು ಮಕ್ಕಳ ಹಕ್ಕುಗಳ ಬಗ್ಗೆ ಅರಿತುಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು. ತಾಲ್ಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ತೆಂಕನಿಡಿಯೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭಾ ಎಸ್‌. ಪೂಜಾರಿ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ದಿಲೀಪ್‌ ಹೆಗ್ಡೆ, ಸಂಯೋಜಕಿ ಜ್ಯೋತಿ, ಪಡಿ ಸಂಸ್ಥೆಯ ಸಂಯೋಜಕಿ ಜಯಂತಿ ಹರೀಶ್‌, ಕಲ್ಯಾಣಪುರ ಕ್ಲಸ್ಟರ್‌ನ ಪ್ರವೀಣ್ ಶೆಟ್ಟಿ, ಪಿಡಿಒ ಸಂತೋಷ್‌ ಜೋಗಿ, ಪಂಚಾಯಿತಿಯ ಸದಸ್ಯರಾದ ಉಷಾ, ಪುಷ್ಪಾ, ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಕಳ ತಾಲ್ಲೂಕು ಸಂಯೋಜಕಿ ಸುಶ್ಮಿತಾ ಉಪಸ್ಥಿತರಿದ್ದರು.

ವಾಸು ಆಚಾರ್‌ ಸ್ವಾಗತಿಸಿದರು, ಮೋಹನ್‌ ಸಾಲಿಕೇರಿ ನಿರೂಪಿಸಿದರು, ತಾಲ್ಲೂಕು ಸಂಯೋಜಕಿ ಪುಷ್ಪಲತಾ ವಂದಿಸಿದರು.
ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ತಾಲ್ಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬ್ರಹ್ಮಾವರ ವಲಯ, ತೆಂಕನಿಡಿಯೂರು ಗ್ರಾಮ ಪಂಚಾಯಿತಿ, ಮಂಗಳೂರು ಪಡಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ  ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT