ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ

Last Updated 23 ಜೂನ್ 2014, 19:30 IST
ಅಕ್ಷರ ಗಾತ್ರ

ಲಖನೌ (ಐಎಎನ್‌ಎಸ್‌): ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಏಳು ವರ್ಷದ ಬಾಲಕಿ ಮೇಲೆ ಮೂರು ಜನ ದುಷ್ಕರ್ಮಿ­ಗಳು  ಸಾಮೂಹಿಕ ಅತ್ಯಾ­ಚಾರ ನಡೆಸಿದ ಘಟನೆ ಉತ್ತರ­ಪ್ರದೇಶದ ಮುಜಫ್ಫರನಗರ ಜಿಲ್ಲೆ­ಯಲ್ಲಿ ಭಾನುವಾರ ನಡೆದಿದೆ.

‘ಬಾಲಕಿ ಬಹಿರ್ದೆಸೆಗೆ ತೆರಳಿದ್ದಾಗ ಒಬ್ಬ ಆರೋಪಿ ಅಲ್ಲಿದ್ದ ಪೊದೆ ಸಮೀಪ ಆಕೆಯನ್ನು ಎಳೆದು­ಕೊಂಡು ಹೋಗಿ  ಆತನ ಇನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಇನ್ನಿ­ಬ್ಬರು ಆರೋಪಿಗಳು ತಪ್ಪಿಸಿ­ಕೊಂ­ಡಿದ್ದಾರೆ.  ಅವರಿ­ಗಾಗಿ ಶೋಧ ನಡೆಸ­ಲಾಗು­ತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT