ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಬಹುಮತ ಸಾಬೀತಿಗೆ ಸುಪ್ರೀಂ ಸೂಚನೆ

Last Updated 6 ಮೇ 2016, 9:47 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕೇಂದ್ರ ಸರ್ಕಾರ ಶುಕ್ರವಾರ ಸಮ್ಮತಿ ಸೂಚಿಸಿದೆ.

ಮೇ.10 ರಂದು ಬಹುಮತ ಸಾಬೀತು ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಇದೇ ವೇಳೆ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು  ವೀಕ್ಷಕರನ್ನು ನೇಮಕ ಮಾಡುವಂತೆ  ಕೋರ್ಟ್‌ಗೆ ಮನವಿ ಮಾಡಿದರು.
ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅನರ್ಹಗೊಂಡ ಕಾಂಗ್ರೆಸ್ ನ 9 ಶಾಸಕರು ಮತ ಚಲಾಯಿಸುವಂತಿಲ್ಲ ಎಂದು  ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ವಿಶ್ವಾಸಮತ ದಿನದಂದು ಉತ್ತರಾಖಂಡ ವಿಧಾನಸಭೆಯಲ್ಲಿ  ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವಿ ಸಾಮರ್ಥ್ಯ ಪರೀಕ್ಷೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT