ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ

Last Updated 10 ಫೆಬ್ರುವರಿ 2016, 19:48 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಸಂಜೆ 5ಕ್ಕೆ ಕೊನೆಯಾಗಲಿದೆ.

ಹೆಬ್ಬಾಳ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಗುರುವಾರ ಕಾಂಗ್ರೆಸ್‌ ಅಭ್ಯರ್ಥಿ ಸಿ.ಕೆ.ಅಬ್ದುಲ್‌ ರೆಹಮಾನ್‌ ಷರೀಫ್‌ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು, ಡಿ.ವಿ.ಸದಾನಂದ ಗೌಡ ಅವರು  ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಇದೇ ರೀತಿ ದೇವದುರ್ಗ ಮತ್ತು ಬೀದರ್‌ ಕ್ಷೇತ್ರಗಳಲ್ಲೂ ವಿವಿಧ ಪಕ್ಷಗಳ ಮುಖಂಡರು ಮತಯಾಚನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಹಿರಂಗ ಪ್ರಚಾರದ ಅವಧಿ ಮುಗಿದ ನಂತರ ಕ್ಷೇತ್ರದ ಮತದಾರರಲ್ಲದ ಮುಖಂಡರು ಕ್ಷೇತ್ರ ವನ್ನು ತೊರೆಯಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT