ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ: ಶಾಂತಿಯುತ ಮತದಾನ

Last Updated 13 ಸೆಪ್ಟೆಂಬರ್ 2014, 8:53 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ಮೂರು ಲೋಕಸಭಾ ಮತ್ತು 33 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು ಮಧ್ಯಾಹ್ನದ ವೇಳೆಗೆ ಶೇ. 40 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗಿನಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಎಲ್ಲಿಯೂ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ಸಂಜೆ ಆರು ಗಂಟೆಯ ವರೆಗೂ ಮತದಾನ ನಡೆಯಲಿದೆ. ಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಲ್ಲೂ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸಿದ್ದ ವಡೋದರಾ, ಉತ್ತರ ಪ್ರದೇಶದ ಮೇನ್ಪುರಿ ಮತ್ತು ತೆಲಂಗಾಣದ ಮೇದಕ್‌ ಲೋಕಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದ 2, ಅಸ್ಸಾಂನ 3, ರಾಜಸ್ಥಾನದ 4, ಗುಜರಾತ್ ನ 9,ಉತ್ತರಪ್ರದೇಶದ 11, ಆಂಧ್ರಪ್ರದೇಶ, ಸಿಕ್ಕಿಂ ಹಾಗೂ ತ್ರಿಪುರ ರಾಜ್ಯಗಳ ತಲಾ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಈ ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಸೆ. 16ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT