ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಭಯ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

ಲೋಕಸಭಾ ಉಪ ಚುನಾವಣೆ: ಇಂದು ಮತ ಎಣಿಕೆ
Last Updated 24 ಆಗಸ್ಟ್ 2013, 3:59 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪ ಚುನಾವಣೆಗಳ ಮತ ಎಣಿಕೆ ಆರಂಭಗೊಂಡಿದ್ದು, ಭರದಿಂದ ಸಾಗಿದೆ. ಉಭಯ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ 326 ಬೂತ್‌ಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಅವರು ಪ್ರತಿಸ್ಪರ್ಧಿ ಜೆಡಿಎಸ್‌ನ ಸಿ.ಎಸ್.ಪುಟ್ಟರಾಜು ಅವರಿಗಿಂತ 10 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆಯಲ್ಲಿದ್ದಾರೆ.

ಇನ್ನು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲೂ `ಕೈ' ಪಾಳಯ ಮುನ್ನಡೆ ಸಾಧಿಸಿದೆ. ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ ಅವರಿಂತ 11 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಮುಖ ಪ್ರತಿಪಕ್ಷ ಜೆಡಿಎಸ್‌ಗೆ ಪ್ರತಿಷ್ಠೆಯ ಕಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT