ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಎಂ. ಕಲಬುರ್ಗಿ ಹತ್ಯೆ: ಕೂಲಿ ಕಾರ್ಮಿಕರ ಸಂಘಟನೆ ಆಕ್ರೋಶ

Last Updated 31 ಆಗಸ್ಟ್ 2015, 10:19 IST
ಅಕ್ಷರ ಗಾತ್ರ

ಗೌರಿಬಿದನೂರು: ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ  ಕಗ್ಗೊಲೆ ಮಾಡಿದಂತಾಗಿದೆ ಎಂದು ಕೃಷಿ ಕೂಲಿ ಕಾರ್ಮಿಕರ ಸಂಘಟನೆ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಸಿ.ಅಶ್ವತ್ಥಪ್ಪ ಹಾಗೂ ಸಾಮಾಜಿಕ ಕಾರ್ಯಕರ್ತ ಆನೂಡಿ ನಾಗರಾಜ್ ಖಂಡಿಸಿದ್ದಾರೆ.

ಇರುವ ವಿಷಯವನ್ನು ಮುಕ್ತವಾಗಿ ಮಾತನಾಡುವುದು ತಪ್ಪಾ? ಸಾಹಿತಿಯಾದವರನ್ನ ಈ ರೀತಿ ಹತ್ಯೆ ಮಾಡಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಇದೆಲ್ಲಾ ನೋಡಿದರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT