ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ತೊರೆದ ಅಂಜಲಿ, ಪ್ರೀತಿ

Last Updated 5 ಜೂನ್ 2014, 14:27 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ) ಎಎಪಿ ಪಕ್ಷದ ಹಿರಿಯ ನಾಯಕಿ ಅಂಜಲಿ ದಮಾನಿಯ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಿ ಮೆನನ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಘಟಕದ ಅಧ್ಯಕ್ಷೆಯಾಗಿದ್ದ ಅಂಜಲಿ ದಮಾನಿಯ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.

ನಾಗಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಿತಿನ್‌ ಗಡ್ಕರಿ ವಿರುದ್ಧ ಅಂಜಲಿ ಸೋತಿದ್ದರು. ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಅಂಜಲಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಎಎಪಿ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಿ ಮೆನನ್‌ ಕೂಡ ಪಕ್ಷ ತೊರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT