ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಎಡಿಎಂಕೆ ಸಂಸದರಿಂದ ಸತ್ಯಾಗ್ರಹ

Last Updated 2 ಅಕ್ಟೋಬರ್ 2014, 11:13 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಯಲಲಿತಾ ಅವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎಐಎಡಿಎಂಕೆಯ 45 ಸಂಸದರು ನವದೆಹಲಿಯಲ್ಲಿರುವ ಸಂಸತ್‌ ಭವನದ ಎದುರಿನ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದರು.

18 ವರ್ಷಗಳಷ್ಟು ಹಳೆಯ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ವರಿಷ್ಠೆ ಜೆ.ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಬೆಳಿಗ್ಗೆ 10ಗಂಟೆಗೆ ಆರಂಭಗೊಂಡಿರುವ ಸತ್ಯಾಗ್ರಹ ಸಂಜೆ 5 ಗಂಟೆಯ ವರೆಗೂ ನಡೆಯಲಿದೆ ಎಂದು ಪಕ್ಷದ ಮುಖಂಡ ಪಿ.ವೇಣುಗೋಪಾಲ್ ತಿಳಿಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆಯಲ್ಲಿ  ಆಗುತ್ತಿರುವ ವಿಳಂಬದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಅವರು, ಕಾನೂನಿನ ಪ್ರಕಾರ ಜಯಲಲಿತಾ ಅವರಿಗೆ ಶೀಘ್ರವೇ ಜಾಮೀನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

‘ಜಯಲಲಿತಾ ಅವರಿಗೆ ಜಾಮೀನು ನೀಡುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಷ್ಟ್ರದ ಗಮನ ಸೆಳೆಯುವುದು ಉಪವಾಸ ಸತ್ಯಾಗ್ರಹದ ಉದ್ದೇಶ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT