ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ ಸೋಂಕು ಪ್ರಮಾಣ ಇಳಿಕೆ

Last Updated 25 ಜುಲೈ 2014, 12:11 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ದಶಕದಿಂದೀಚೆಗೆ ದೇಶದಲ್ಲಿ ಎಚ್‌ಐವಿ ಸೋಂಕಿಗೆ ತುತ್ತಾಗುವವರ ಪ್ರಮಾಣ ಶೇ 57ರಷ್ಟು ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

‘2011–12ರಲ್ಲಿ ದೇಶದಲ್ಲಿ ಎಚ್‌ಐವಿ ಸೋಂಕು ತಗುಲಿದ್ದವರು ಸಂಖ್ಯೆ 2.85 ಲಕ್ಷದಷ್ಟಿತ್ತು. 2013–14ರಲ್ಲಿ ಈ ಪ್ರಮಾಣ 2.39 ಲಕ್ಷಕ್ಕೆ ಇಳಿಕೆಯಾಗಿದೆ’ ಎಂದು ಅವರು ಹೇಳಿದ್ದಾರೆ.

‘ನಾಲ್ಕನೇ ಹಂತದ (2012–17) ರಾಷ್ಟ್ರೀಯ ಏಡ್ಸ್‌ ನಿಯಂತ್ರಣ ಯೋಜನೆಯಡಿ ಹೊಸದಾಗಿ ಎಚ್‌ಐವಿ ಸೋಂಕು ತಗುಲುವ ಪ್ರಮಾಣವನ್ನು ಶೇ 50ರಷ್ಟು ತಗ್ಗಿಸುವುದು ಹಾಗೂ ಎಚ್‌ಐವಿಯೊಂದಿಗೆ ಬದುಕುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವ ಗುರಿಯಿದೆ’ ಎಂದು ತಿಳಿಸಿದ್ದಾರೆ.

‘ಈ ವರ್ಷದ ಮೇ 31ರವರೆಗೆ 7.77 ಲಕ್ಷ ಮಂದಿ ಎಚ್‌ಐವಿ ಸೋಂಕಿಗೆ ಒಳಗಾದವರು ಉಚಿತವಾಗಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 43 ಸಾವಿರ ರೋಗಿಗಳು 15 ವರ್ಷಕ್ಕಿಂತ ಕೆಳಗಿನವರು. ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಹೆಚ್ಚಿನ ಜನರು ಎಚ್‌ಐವಿ ಮತ್ತು ಏಡ್ಸ್‌ಗೆ ತುತ್ತಾಗಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT