ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಜಿ ಚೀನಾ ಬೆಂಬಲ ಗಿಟ್ಟಿಸಲು ಪ್ರಯತ್ನ

Last Updated 20 ಜುಲೈ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ಪರಮಾಣು ಪೂರೈಕೆದಾರ ರಾಷ್ಟ್ರಗಳ ಗುಂಪಿನ (ಎನ್‌ಎಸ್‌ಜಿ) ಸದಸ್ಯತ್ವ ಪಡೆಯಲು ಚೀನಾದ ಬೆಂಬಲ ಗಿಟ್ಟಿಸುವ ಪ್ರಯತ್ನವನ್ನು ಭಾರತ ಮುಂದವರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಬುಧವಾರ ಲೋಕಸಭೆಗೆ ತಿಳಿಸಿದರು.

ಭಾರತ ಅಣ್ವಸ್ತ್ರ ಪ್ರಸರಣ ತಡೆ (ಎನ್‌ಪಿಟಿ) ಒಪ್ಪಂದಕ್ಕೆ ಸಹಿ ಹಾಕುವುದಿಲ್ಲ ಎಂಬುದನ್ನು ಅವರು ಪುನರುಚ್ಚರಿಸಿದರು. ‘ಸೋಲ್‌ನಲ್ಲಿ ಹೋದ ತಿಂಗಳು ನಡೆದ ಎನ್‌ಎಸ್‌ಜಿ ವಾರ್ಷಿಕ ಸಭೆಯಲ್ಲಿ ಭಾರತದ ಸದಸ್ಯತ್ವಕ್ಕೆ ಚೀನಾ ಮಾತ್ರ ವಿರೋಧ ವ್ಯಕ್ತಪಡಿಸಿತ್ತು. ಇದರಿಂದ 48 ರಾಷ್ಟ್ರಗಳ ಗುಂಪಿಗೆ ಸೇರಲು ಭಾರತ ವಿಫಲವಾಗಿತ್ತು’ ಎಂದು ಅವರು ತಿಳಿಸಿದರು.

‘ಆದರೆ ಚೀನಾದ ಬೆಂಬಲ ಗಿಟ್ಟಿಸಲು ಭಾರತ ಪ್ರಯತ್ನ ಮುಂದುವರಿಸಲಿದೆ. ಚೀನಾ ಈ ಬಾರಿ ಒಪ್ಪಿಲ್ಲ ಹೌದು. ಆದರೆ ಭಾರತದ ಸದಸ್ಯತ್ವವನ್ನು ಎಂದೆಂದಿಗೂ ವಿರೋಧಿಸಬಹುದು ಎಂಬ ತೀರ್ಮಾನಕ್ಕೆ ಬರುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT