ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಸ್‌ಜಿ: ಭಾರತಕ್ಕೆ ಮತ್ತೊಂದು ಅವಕಾಶ ಸಾಧ್ಯತೆ

Last Updated 26 ಜೂನ್ 2016, 12:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪರಮಾಣು ಪೂರೈಕೆದಾರರ ಗುಂಪು (ಎನ್‌ಎಸ್‌ಜಿ) ಸೇರಲು ಭಾರತಕ್ಕೆ ಅವಕಾಶ ಸಿಕ್ಕಿಲ್ಲ. ಆದರೆ, ಪರಮಾಣು ಪ್ರಸರಣ ನಿಷೇಧ ಒಪ್ಪಂದಕ್ಕೆ (ಎನ್‌ಪಿಟಿ) ಸಹಿ ಹಾಕದ ರಾಷ್ಟ್ರಗಳಿಗೆ ಎನ್‌ಎಸ್‌ಜಿ ಸದಸ್ಯತ್ವ ನೀಡುವ ಸಂಬಂಧ ವರ್ಷಾಂತ್ಯದಲ್ಲಿ ಮತ್ತೆ ಸಭೆ ನಡೆಯಲಿದೆ.

ಹೀಗಾಗಿ ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ಪಡೆಯಲು ಮತ್ತೊಂದು ಅವಕಾಶ ಲಭ್ಯವಾಗುವ ಸಾಧ್ಯತೆ ಇದೆ. ಸೋಲ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎನ್‌ಎಸ್‌ಜಿಯ 48 ಸದಸ್ಯ ರಾಷ್ಟ್ರಗಳ ವಾರ್ಷಿಕ ಸಭೆಯಲ್ಲಿ ಎನ್‌ಎಸ್‌ಜಿಯ ಸದಸ್ಯತ್ವ ಬೇಕು ಎಂದು ಕೋರಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು.
ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ನೀಡಲು ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಸಾಮಾನ್ಯವಾಗಿ ವರ್ಷಕ್ಕೆ ಒಮ್ಮೆ ಮಾತ್ರ ಎನ್‌ಎಸ್‌ಜಿ ರಾಷ್ಟ್ರಗಳ ಸಭೆ ನಡೆಯುತ್ತದೆ. ಆದರೆ, ಮೆಕ್ಸಿಕೊ ದೇಶದ ಸಲಹೆ ಮೇರೆಗೆ ಈ ವರ್ಷದ ಅಂತ್ಯದಲ್ಲಿ ಎನ್‌ಎಸ್‌ಜಿ ಸದಸ್ಯತ್ವ ರಾಷ್ಟ್ರಗಳ ಮತ್ತೊಂದು ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ವೇಳೆ ಭಾರತಕ್ಕೆ ಸದಸ್ಯತ್ವ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT