ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ವರ್ಥ್‌ ನಿರ್ವಹಣಾ ನಿರ್ದೇಶಕ

ಇಂಗ್ಲೆಂಡ್‌ನಲ್ಲಿ ನಡೆಯುವ 2019ರ ಏಕದಿನ ವಿಶ್ವಕಪ್
Last Updated 19 ಜುಲೈ 2016, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ 2019ರಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಗೆ ಸ್ಟೀವ್‌ ಎಲ್ವರ್ಥ್‌ ಅವರನ್ನು ನಿರ್ವಹಣಾ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌  ಮತ್ತು ಟೂರ್ನಿಗೆ ಆತಿಥ್ಯ ವಹಿಸಿರುವ ಆತಿಥೇಯ ಮಂಡಳಿ ಈ ಆಯ್ಕೆ ಮಾಡಿದೆ. ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಮತ್ತು ಮಹಿಳಾ ವಿಶ್ವಕಪ್‌ ಟೂರ್ನಿಗಳ ನಿರ್ವಹಣೆಯನ್ನು ಅವರೇ ನೋಡಿಕೊಳ್ಳಲಿದ್ದಾರೆ.

ಎಲ್ವರ್ಥ್‌ ಅವರು 2013ರ ಚಾಂಪಿಯನ್ಸ್‌ ಟ್ರೋಫಿ, 2009ರ ಐಸಿಸಿ ವಿಶ್ವ ಟ್ವೆಂಟಿ–20 ಮತ್ತು 2007ರ ಚುಟುಕು ಕ್ರಿಕೆಟ್‌ ಟೂರ್ನಿಗಳಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಲ್ವರ್ಥ್‌ ನಾಲ್ಕು ಟೆಸ್ಟ್‌ ಮತ್ತು 39 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದಾರೆ. 1

998ರಲ್ಲಿ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯವಾಡುವ ಮೂಲಕ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದರು. 2002ರಲ್ಲಿ ಕೊನೆಯ ಟೆಸ್ಟ್ ಆಡಿದ್ದರು.

ಕ್ರೀಡಾ ಆಡಳಿತದಲ್ಲಿಯೂ ಅನುಭವ ಹೊಂದಿರುವ ಎಲ್ವರ್ಥ್‌ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಯ ಮಾರುಕಟ್ಟೆ ವ್ಯವಹಾರ ವಿಭಾಗದಲ್ಲಿ ಕೆಲಸ ಮಾಡಿದ್ದರು.

‘ಎಲ್ವರ್ಥ್‌ ಐಸಿಸಿ ಮಟ್ಟದ ದೊಡ್ಡ ಟೂರ್ನಿಗಳನ್ನು ಯಶಸ್ವಿಯಾಗಿ ಸಂಘಟಿಸಿದ ಅನುಭವಿ. ಕ್ರಿಕೆಟ್‌ ಆಡಳಿತಗಾರರಾಗಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ಒಲಿಂಪಿಕ್ಸ್‌ಗೆ ನಿರ್ದೇಶಕರಾಗಿದ್ದು ಸಂತೋಷದ ವಿಷಯ’ ಎಂದು ಐಸಿಸಿ  ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಡೇವಿಡ್ ರಿಚರ್ಡ್‌ಸನ್‌ ಹೇಳಿದ್ದಾರೆ.

‘2003ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ನನಗೆ ಮಹತ್ವದ ಅವಕಾಶಗಳು ಲಭಿಸಿವೆ. ಕ್ರಿಕೆಟ್‌ ಆಡಳಿತ ನಿರ್ವಹಣೆಯಲ್ಲಿ ಮಹತ್ವದ ಕೆಲಸಗಳನ್ನು ಮಾಡಿದ ಖುಷಿಯಿದೆ. 2019ರ ವಿಶ್ವಕಪ್‌ ಅನ್ನು ಹಿಂದಿನ ಟೂರ್ನಿಗಳಿಗಿಂತಲೂ ಚೆನ್ನಾಗಿ ಆಯೋಜಿಸಲು ವ್ಯವಸ್ಥೆ ಮಾಡುತ್ತೇನೆ’ ಎಂದು ಎಲ್ವರ್ಥ್‌ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT