ಸೀಮೆಎಣ್ಣೆ, ಡೀಸೆಲ್ ಮತ್ತು ಎಲ್‌ಪಿಜಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಯೋಜನಾ ಆಯೋಗದ ಮಾಜಿ ಸದಸ್ಯ ಕೀರ್ತಿ ಎಸ್, ಪಾರೀಖ್ ನೇತೃತ್ವದ ತಜ್ಞರ ಸಮಿತಿ ನೀಡಿದ ವರದಿ ಆಧರಿಸಿ, ತೈಲ ಸಚಿವಾಲಯ ಕರಡು ಪ್ರತಿ ಸಿದ್ಧಪಡಿಸಿದ್ದು ಶೀಘ್ರದಲ್ಲೇ ‘ಸಿಸಿಪಿಎ’ ಪರಿಶೀಲನೆಗೆ ಕಳುಹಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಡೀಸೆಲ್ ಬೆಲೆಯು ಸದ್ಯಕ್ಕೆ ಈಗಿನಂತೆ ಪ್ರತಿ ತಿಂಗಳಿಗೆ ಸರಾಸರಿ 40 ರಿಂದ 50 ಪೈಸೆಯಷ್ಟು ಹೆಚ್ಚುತ್ತಾ ಹೋಗಲಿದೆ. ಯುಪಿಎ ಸರ್ಕಾರ ಅವಧಿಯಲ್ಲಿ ಇದನ್ನು ಜಾರಿಗೊಳಿಸಲಾಗಿತ್ತು.
2010ರಲ್ಲಿ ಪೆಟ್ರೋಲ್ ಬೆಲೆ ನಿಗದಿಯನ್ನು ಸರ್ಕಾರಿ ನಿಯಂತ್ರಣದಿಂದ ಮುಕ್ತಗೊಳಿಸಲಾಗಿತ್ತು. ಇದೇ ರೀತಿ ಡೀಸೆಲ್ ಬೆಲೆಯನ್ನೂ ನಿಯಂತ್ರಣ ಮುಕ್ತಗೊಳಿಸಬೇಕು ಎನ್ನುವ ಪ್ರಸ್ತಾವವನ್ನೂ ತೈಲ ಸಚಿವಾಲಯ ‘ಸಿಸಿಪಿಎ’ ಮುಂದಿರಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಅನಿಲ, ತೈಲ ಬೆಲೆ ಏರಿಕೆಯಿಂದ ಸರ್ಕಾರಕ್ಕೆ ವಾರ್ಷಿಕ ರೂ 72 ಸಾವಿರ ಕೋಟಿಯಷ್ಟು ಸಬ್ಸಿಡಿ ಹೊರೆ ತಗ್ಗಲಿದೆ.