ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್‌ ಕ್ರೀಡಾಕೂಟದ ಹಾಕಿ ‘ಬಿ’ ಗುಂಪಿನಲ್ಲಿ ಭಾರತ ತಂಡ

Last Updated 20 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಪುರುಷರ ತಂಡಗಳು ಮುಂಬರುವ ಏಷ್ಯನ್‌ ಕ್ರೀಡಾಕೂಟಕ್ಕೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಮುಂದಿನ ತಿಂಗಳು 19ರಿಂದ ಅಕ್ಟೋಬರ್‌ 4ರ ವರೆಗೆ ದಕ್ಷಿಣ ಕೊರಿಯಾದ ಇಂಚೋನ್‌ನಲ್ಲಿ ಏಷ್ಯನ್‌ ಕ್ರೀಡಾಕೂಟ ನಡೆಯಲಿದೆ. ಒಟ್ಟು ಹತ್ತು ರಾಷ್ಟ್ರಗಳು ಪೈಪೋಟಿ ನಡೆಸಲಿವೆ. ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ಹಾಗೂ ಪಾಕಿಸ್ತಾನದ ಜೊತೆ ಚೀನಾ, ಒಮನ್‌ ಮತ್ತು ಶ್ರೀಲಂಕಾ ತಂಡಗಳಿವೆ. ಏಷ್ಯನ್‌ ಕೂಟದಲ್ಲಿ ಚಾಂಪಿಯನ್‌ ಆಗುವ ತಂಡಗಳು 2016ರಲ್ಲಿ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯಲಿವೆ.
ಹೋದ ಸಲದ ಏಷ್ಯನ್‌ ಕ್ರೀಡಾಕೂಟದಲ್ಲಿ ರನ್ನರ್ಸ್‌ ಅಪ್‌ ಆಗಿದ್ದ ಮಲೇಷ್ಯಾ, ದಕ್ಷಿಣ ಕೊರಿಯಾ, ಜಪಾನ್‌, ಬಾಂಗ್ಲಾದೇಶ ಮತ್ತು ಸಿಂಗಪುರ ತಂಡಗಳು ‘ಎ’ ಗುಂಪಿನಲ್ಲಿ ಸ್ಥಾನ ಹೊಂದಿವೆ. 

ಭಾರತ ಮಹಿಳಾ ಹಾಕಿ ತಂಡ ‘ಎ’ ಗುಂಪಿನಲ್ಲಿದ್ದು, ಚೀನಾ, ಮಲೇಷ್ಯಾ ಮತ್ತು ಥಾಯ್ಲೆಂಡ್‌ ಗುಂಪಿನಲ್ಲಿರುವ ಇತರ ತಂಡಗಳಾಗಿವೆ. 2010ರ ರನ್ನರ್ಸ್‌ ಅಪ್‌ ದಕ್ಷಿಣ ಕೊರಿಯಾ, ಜಪಾನ್‌, ಕಜಕಸ್ತಾನ ಮತ್ತು ಹಾಂಕಾಂಗ್‌ ತಂಡಗಳು ‘ಬಿ’ ಗುಂಪಿನಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT