ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಸ್‌ಎಫ್‌ ಅಥ್ಲೀಟ್ಸ್‌ ಸಮಿತಿಗೆ ಬಿಂದ್ರಾ ಮುಖ್ಯಸ್ಥ

Last Updated 30 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಒಲಿಂಪಿಕ್ಸ್‌ನ  ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಬಂಗಾರ ಗೆದ್ದಿರುವ  ಏಕೈಕ ಭಾರತೀಯ ಶೂಟರ್‌ ಎಂಬ ಹಿರಿಮೆ ಹೊಂದಿರುವ  ಅಭಿನವ್‌ ಬಿಂದ್ರಾ ಈಗ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ. 

ಅಂತರರಾಷ್ಟ್ರೀಯ  ಶೂಟಿಂಗ್‌ ಸ್ಪೋರ್ಟ್ಸ್‌ ಫೆಡರೇಷನ್‌ನ  ಅಥ್ಲೀಟ್‌ಗಳ ಸಮಿತಿಯ ಮುಖ್ಯಸ್ಥರಾಗಿ ಬಿಂದ್ರಾ ಗುರುವಾರ ಆಯ್ಕೆಯಾಗಿದ್ದಾರೆ. ಐಎಸ್‌ಎಸ್‌ಎಫ್‌ ಈ ವಿಷಯವನ್ನು ಖಚಿತಪಡಿಸಿದ್ದು, ಈ ಸಂಬಂಧ  ಭಾರತ ರಾಷ್ಟ್ರೀಯ ರೈಫಲ್‌ ಸಮಿತಿಗೆ ಪತ್ರ ಬರೆದಿದೆ.

ಬಿಂದ್ರಾ ಐಎಸ್‌ಎಸ್‌ಎಫ್‌ನ ಅಥ್ಲೀಟ್‌ಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಭಾರತದ ಶೂಟರ್‌ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಬಿಂದ್ರಾ ಐಎಸ್‌ಎಸ್‌ಎಫ್‌ನ ಆಡಳಿತ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸುವ ಅವಕಾಶವನ್ನೂ ಪಡೆದುಕೊಂಡಿ­ದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT