ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ ಸಂಪರ್ಕ ಶಂಕೆ ಒಬ್ಬನ ಬಂಧನ

Last Updated 23 ಜುಲೈ 2016, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರ ಸಂಘಟನೆಗೆ ಯುವಕರ ನೇಮಕಕ್ಕೆ ನೆರವಾಗುತ್ತಿದ್ದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ .

ರಿಜ್ವಾನ ಖಾನ್‌ ಎಂಬಾತನನ್ನು ಠಾಣೆ ಜಿಲ್ಲೆಯ ಕಲ್ಯಾಣದಲ್ಲಿರುವ ಆತನ ಮನೆಯಲ್ಲೇ ಬಂಧಿಸಲಾಗಿದೆ ಎಂದು ಹಿರಿಯ ಎಟಿಎಸ್‌ ಅಧಿಕಾರಿ ಶನಿವಾರ ತಿಳಿಸಿದ್ದಾರೆ. ಖಾನ್‌ ಐಎಸ್‌ ಸಂಘಟನೆಗೆ ಯುವಕರ ನೇಮಕ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದ, ಅಲ್ಲದೇ ಮತಾಂತರ   ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲೂ ಈತನ ಮೇಲೆ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT