ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಟಿ ಮದ್ರಾಸ್‌: ಡಿವೈಎಫ್ಐ ಪ್ರತಿಭಟನೆ

Last Updated 30 ಮೇ 2015, 9:24 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಪ್ರಧಾನಿ ಮೋದಿ ಅವರನ್ನು ಟೀಕಿಸಿರುವ ಆರೋಪದ ಮೇಲೆ  ಐಐಟಿ–ಮದ್ರಾಸ್‌ನ ವಿದ್ಯಾರ್ಥಿ ಸಂಘದ ಮೇಲೆ ನಿಷೇಧ ಹೇರಿರುವ ಕ್ರಮವನ್ನು ಖಂಡಿಸಿ ಡೆಮಾಕ್ರಟಿಕ್‌ ಯೂತ್‌ ಫೆಡರೇಶನ್‌ ಆಫ್‌ ಇಂಡಿಯಾ (ಡಿವೈಎಫ್‌ಐ) ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್‌–ಪೆರಿಯಾರ್‌ ಸ್ಟಡಿ ಸರ್ಕಲ್‌ (ಎಪಿಎಸ್‌ಸಿ) ಮೇಲೆ ನಿಷೇಧ ಹೇರಿರುವ ಐಐಟಿಯ ಈ ಕ್ರಮವನ್ನು  ವಿರೋಧಿಸಿರುವ ಡಿವೈಎಫ್‌ಐ ಮೋದಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಇಂದು ಐಐಟಿ ಕ್ಯಾಂಪಸ್‌ ಮುಂದೆ ಜಮಾಯಿಸಿದ್ದ ಡಿವೈಎಫ್‌ಐ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಐಐಟಿಯ ಆಡಳಿತಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನಚಕಮಕಿ ನಡೆಯಿತು. ಪೊಲೀಸರು  ವಿದ್ಯಾರ್ಥಿ ಮುಖಂಡರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಈ ಪ್ರತಿಭಟನೆಗೆ ಡಿಎಂಕೆ ಮತ್ತು ಎಂಡಿಎಂಕೆ ಪಕ್ಷಗಳು ಬೆಂಬಲ ಸೂಚಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT