ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಟ್ಟಿಗೇ 43 ತಾಲ್ಲೂಕು ರಚನೆ

Last Updated 22 ಜುಲೈ 2015, 19:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ 43 ತಾಲ್ಲೂಕುಗಳನ್ನು ರಚಿಸಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಪ್ರಕಟಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪಟೇಲ್‌ ಶಿವರಾಮ್‌ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪ್ರತಿಯೊಂದು ತಾಲ್ಲೂಕು ರಚನೆಗೆ ₹ 25 ಕೋಟಿ ಅನುದಾನದ ಅಗತ್ಯ ಇದೆ ಎಂದರು.

‘ಅನುದಾನದ ಲಭ್ಯತೆಯನ್ನು ಗಮನಿಸದೆ ತರಾತುರಿಯಲ್ಲಿ ಬಿಜೆಪಿ ಸರ್ಕಾರ ಹೊಸ ತಾಲ್ಲೂಕುಗಳ ಘೋಷಣೆ ಮಾಡಿತ್ತು. ಹಂತ ಹಂತವಾಗಿ ತಾಲ್ಲೂಕುಗಳ ರಚನೆ ಮಾಡಿದರೆ ಗೊಂದಲ ಸೃಷ್ಟಿಯಾಗುತ್ತದೆ ಹಾಗೂ ಇನ್ನಷ್ಟು ಬೇಡಿಕೆ ಬರುತ್ತದೆ. ಇದಕ್ಕೆ ನನ್ನ ವಿರೋಧ ಇದೆ’ ಎಂದರು.

‘ಹಂತ ಹಂತವಾಗಿ ತಾಲ್ಲೂಕುಗಳ ರಚನೆ ಮಾಡಬೇಕು’ ಎಂದು ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT