ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಚಿತ್ಯಪೂರ್ಣ

Last Updated 1 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಒಂದರಿಂದ ಐದನೆಯ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡುವ ಹಾಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹತ್ತನೇ ತರಗತಿಯವರೆಗೆ ಪ್ರಥಮ ಇಲ್ಲವೆ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ಎರಡು ಮಸೂದೆಗಳನ್ನು ವಿಧಾನಮಂಡಲದ ಉಭಯ ಸದನಗಳು ಅಂಗೀಕರಿಸಿರುವುದು  ಐತಿಹಾಸಿಕ ಸಂಗತಿ.

ರಾಜ್ಯಭಾಷೆ/ ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂಬ ನಿಲುವು ಆಯಾ ರಾಜ್ಯದ ಮಕ್ಕಳ ಶ್ರೇಯೋಭಿವೃದ್ಧಿಯ ಜೊತೆಗೆ ಭಾಷೆ, ಸಂಸ್ಕೃತಿ, ಬದುಕಿನ ಏಳ್ಗೆಯಲ್ಲಿ ಮತ್ತು ನಾಡಿನ ಸಮಗ್ರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಭಾಷೆ ಎಂಬುದು ಕೇವಲ ಸಂವಹನ ಮಾಧ್ಯಮವಾಗಿರದೆ ಸಂಸ್ಕೃತಿಯ ಪ್ರತೀಕವಾಗಿದ್ದು ಬದುಕಿನ ಸಂಜೀವಿನಿಯಾಗಿದೆ. ಚೀನಾ, ಜಪಾನ್, ಜರ್ಮನ್, ರಷ್ಯಾ ಮುಂತಾದ ದೇಶಗಳಲ್ಲಿ ಆಂಗ್ಲ ಭಾಷೆ, ಶಿಕ್ಷಣದ ಮಾಧ್ಯಮವಾಗಿರದೆ ಆಯಾ ದೇಶದ ಜನಭಾಷೆಗಳೇ ಶಿಕ್ಷಣದ ಮಾಧ್ಯಮವಾಗಿರುವುದು ಗಮನಿಸಬೇಕಾದ ಸಂಗತಿಯಾಗಿದೆ. ಮಹಾತ್ಮ ಗಾಂಧೀಜಿಯಾದಿಯಾಗಿ ಜಗತ್ತಿನ ಎಲ್ಲಾ ಚಿಂತಕರು ಮತ್ತು ಶಿಕ್ಷಣ ತಜ್ಞರು ರಾಜ್ಯಭಾಷೆ/ ಮಾತೃಭಾಷೆಯಲ್ಲಿ ಶಿಕ್ಷಣ ನೀಡಬೇಕೆಂದು ಹೇಳಿರುವುದು ಈ ಹಿನ್ನೆಲೆಯಲ್ಲೇ ಎಂಬುದನ್ನು ನೆನೆಯಬೇಕಾಗಿದೆ. ನಮ್ಮ ದೇಶದ ಭಾಷಾವಾರು ಪ್ರಾಂತ್ಯಗಳ ರಚನೆಯೂ ಈ ಸೈದ್ಧಾಂತಿಕ ಹಿನ್ನೆಲೆಯಲ್ಲಿಯೇ ಆಗಿದೆ.

ಹಾಗಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ಮಸೂದೆಗಳನ್ನು ಅಂಗೀಕರಿಸಿರುವುದು  ಔಚಿತ್ಯಪೂರ್ಣ. ಆದರೆ ಇದನ್ನು ಸರಿಯಾದ ನೆಲೆಯಲ್ಲಿ ಆಗುಮಾಡಿಕೊಳ್ಳಬೇಕಾದರೆ ಇನ್ನೊಂದೆರಡು ಹೆಜ್ಜೆ ಮುಂದಕ್ಕೆ ಹೋಗಬೇಕಾಗಿದೆ. ಇದರ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸದರ ಗಮನಕ್ಕೆ ತಂದು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದರ ಮೂಲಕ ಸಾಧಿಸಿಕೊಳ್ಳುವುದು ಜರೂರಿನ ಕೆಲಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT