ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ಬೆಲೆ ನಿಯಂತ್ರಣ ಮುಕ್ತ ಮಧ್ಯಪ್ರವೇಶಕ್ಕೆ ‘ಸುಪ್ರೀಂ’ ನಕಾರ

Last Updated 27 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಹೃದ್ರೋಗ ಮತ್ತು ಮಧುಮೇಹದ ಚಿಕಿತ್ಸೆಗೆ ಬಳಸುವ 108 ಔಷಧಗಳ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೂಕ್ತ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಮೂಲಕ ಈ ಸಮಸ್ಯೆಯ­ನ್ನು ಪರಿಹರಿಸಿ­ಕೊಳ್ಳ­ಬಹುದು ಎಂದು ಕೋರ್ಟ್‌ ಸೂಚಿಸಿದೆ.

‘ಆದೇಶವನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಿ. ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಮತ್ತೆ ಅರ್ಜಿ ಸಲ್ಲಿಸಿ’ ಎಂದು ಮುಖ್ಯ ನ್ಯಾಯ­ಮೂರ್ತಿ ಎಚ್‌.ಎಲ್‌. ದತ್ತು, ನ್ಯಾಯ­ಮೂರ್ತಿಗಳಾದ ಎಂ.ಬಿ. ಲೋಕೂರ್‌ ಮತ್ತು ಎ.ಕೆ. ಸಿಕ್ರಿ ಅವರನ್ನೊಳಗೊಂಡ ಪೀಠ ಹೇಳಿದೆ.

ಜೀವರಕ್ಷಕ ಔಷಧಗಳ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ­ವಾಗಿದೆ. ಈ ನಿರ್ಧಾರ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ಒಡ್ಡುವ ಮೂಲಕ ಔಷಧ ಕಂಪೆನಿಗಳಿಗೆ ಭಾರಿ ಲಾಭ ಮಾಡಿಕೊಳ್ಳಲು ಅವಕಾಶ ಕೊಡು­­ತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಎಂ.ಎಲ್‌.ಶರ್ಮಾ ವಾದಿಸಿದ್ದರು. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿ­ಕಾರವು ಜುಲೈ 10ರಂದು ಹೃದ್ರೋಗ ಮತ್ತು ಮಧುಮೇಹ ಉಪಶಮನಕ್ಕೆ ಬಳಸುವ 108 ಔಷಧಗಳನ್ನು ನಿಯಂತ್ರಣ ಮುಕ್ತಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT