ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ: ಹಾನಿ

Last Updated 10 ಮಾರ್ಚ್ 2015, 5:18 IST
ಅಕ್ಷರ ಗಾತ್ರ

ಕಡೂರು: ಕಟಾವಿಗೆ ಬಂದಿದ್ದ 4 ಎಕರೆ ಕಬ್ಬು ಬೆಳೆ ಆಕಸ್ಮಿಕವಾಗಿ ಬೆಂಕಿಗೆ ಸಂಪೂರ್ಣ ಭಸ್ಮವಾದ ಘಟನೆ ತಾಲ್ಲೂಕಿನ ಬಿಳುವಾಲ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಧ್ಯಾಹ್ನ 2 ಗಂಟೆಗೆ ಬಿಳುವಾಲದ ಕೃಷ್ಣಮೂರ್ತಿ ಅವರಿಗೆ ಸೇರಿದ 7 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ್ದು,  ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು.

ಆ ವೇಳೆಗೆ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದಿದ್ದು, ಅಷ್ಟು ಹೊತ್ತಿಗಾಗಲೇ ಸುಮಾರು 4 ಎಕರೆ ಕಬ್ಬು ಬೆಂಕಿಗೆ ಅಹುತಿಯಾಗಿದೆ.

ಸ್ಥಳಕ್ಕೆ ಕಂದಾಯಾಧಿಕಾರಿ ಸತ್ಯನಾರಾಯಣ್ ಮತ್ತು ಕಸಬಾ ಕೃಷಿ ಅಧಿಕಾರಿ ಲೋಕನಾಥ್ ಭೇಟಿ ನೀಡಿ ಪರಿಶೀಲಿಸಿದರು.
‘ಎರಡು ದಿನದಲ್ಲಿ ಕಬ್ಬು ಕಟಾವು ಮಾಡಲು ಸಿದ್ಧತೆ ನಡೆಸಿದ್ದ ಸಮಯದಲ್ಲಿ ಕಬ್ಬು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು, ನಮ್ಮ ದುರದೃಷ್ಟ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದೆ.

ಈಗ ಏನು ಮಾಡುವುದು ಎಂದು ದಿಕ್ಕು ತೋಚದಂತಾಗಿದೆ. ₨4 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕಬ್ಬು ಬೆಂಕಿಗೆ ಅಹುತಿಯಾಗಿದೆ’ ಕೃಷಿಕ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT