ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡತ ವಿಲೇವಾರಿ: ಸಿ.ಎಂ ಸಭೆ

Last Updated 30 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದ­ರಾಮಯ್ಯ ಅವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಕಡತಗಳ ವಿಲೇವಾರಿ ಕುರಿತು ಪರಾಮರ್ಶೆ ನಡೆಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ­ಗಳ ಸಚಿವ ಟಿ.ಬಿ.ಜಯ ಚಂದ್ರ ಶನಿವಾರ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರ­ರೊಂದಿಗೆ ಮಾತನಾಡಿದ ಅವರು, ‘ಉತ್ತಮ ಹಾಗೂ  ಪಾರದರ್ಶಕ ಆಡಳಿತ ನೀಡುವುದು ನಮ್ಮ ಗುರಿ.  3–4 ವರ್ಷಗಳಿಂದ ಇತ್ಯರ್ಥ ಆಗದೇ ಇರುವ ಕಡತಗಳನ್ನು ವಿಲೇವಾರಿ ಮಾಡಲು ಸರ್ಕಾರ ಆದ್ಯತೆ ನೀಡಲಿದೆ’ ಎಂದರು.

‘ಎಲ್ಲ ಇಲಾಖೆಗಳ ಪ್ರಧಾನ ಕಾರ್ಯ­ದರ್ಶಿಗಳು ಕಡತಗಳ ವಿಲೇವಾರಿಯ ಮೇಲ್ವಿಚಾರಣೆ ನಡೆಸಬೇಕು. ಮುಖ್ಯ­ಮಂತ್ರಿಯವರೂ ಸೇರಿದಂತೆ ಎಲ್ಲ ಸಚಿವರು ವಾರಕ್ಕೆ ಎರಡು ದಿನ ಕಚೇರಿ­ಯಲ್ಲಿ ಕುಳಿತು ಕಡತಗಳ ವಿಲೇವಾರಿ ಮಾಡಲಿದ್ದೇವೆ’ ಎಂದು ಹೇಳಿದರು.

ಸಿದ್ದರಾಮಯ್ಯ ಸೂಚನೆ
ಬೆಂಗಳೂರು:
ಇತ್ಯರ್ಥವಾಗದೇ ಇರುವ ಕಡತಗಳನ್ನು ವಿಲೇವಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದ­ರಾಮಯ್ಯ ಅವರು ಸಂಪುಟ ಸಹೋದ್ಯೋಗಿ­ಗಳಿಗೆ ಹೇಳಿದ್ದಾರೆ.
ಈ ಕುರಿತು ನಿಯಮಿತವಾಗಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ.
ಅಧಿಕೃತ ಮೂಲ­ಗಳ ಪ್ರಕಾರ, ಸರ್ಕಾರದ ವಿವಿಧ ಮಟ್ಟಗಳಲ್ಲಿ ಸುಮಾರು 2 ಲಕ್ಷ ಕಡತಗಳು ವಿಲೇ­ವಾರಿಗೆ ಬಾಕಿ ಇವೆ.

‘ವಿವಿಧ ಇಲಾಖೆಗಳ ಕಾರ್ಯಕ್ರಮ­ಗಳ ಜಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು, ನನ್ನ ನೇತೃತ್ವದಲ್ಲಿ ಸಮಿತಿ­ಯೊಂದನ್ನು ರಚಿಸಲಾಗಿದೆ. ಈಗಾಗಲೆ ಏಳು ಸಭೆಗಳನ್ನು ನಡೆಸಲಾಗಿದೆ. ಬೇರೆ ಬೇರೆ ಇಲಾಖೆಗಳ ವತಿಯಿಂದ ನಡೆ­ಯುವ ಒಂದೇ ರೀತಿಯ ಯೋಜನೆ­ಗಳನ್ನು ಒಟ್ಟುಗೂಡಿಸುವ ಬಗ್ಗೆ ಯೋಚನೆ ನಡೆದಿದೆ’ ಎಂದರು.

ನದಿ ಜೋಡಣೆ: ದಕ್ಷಿಣ ಭಾರತದ ಪ್ರಮುಖ ನದಿಗಳಾದ ಮಹಾನದಿ, ಗೋದಾ­ವರಿ, ಕೃಷ್ಣಾ ಮತ್ತು ಕಾವೇರಿ ನದಿಗಳನ್ನು ಪರಸ್ಪರ ಸಂಪರ್ಕಿಸುವ  ‘ಪರ್ಯಾಯದ್ವೀಪ ನದಿ ಜೋಡಣೆ ಯೋಜನೆ’ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ದಕ್ಷಿಣದ ಎಲ್ಲಾ ರಾಜ್ಯಗಳು ಈ ಬಗ್ಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಬೇಕಿದೆ. ಈಗಾಗಲೇ ಆಂಧ್ರ ಪ್ರದೇಶ ಈ ಬಗ್ಗೆ ಸಕಾರಾತ್ಮಕ­ವಾಗಿ ಸ್ಪಂದಿಸಿದೆ ಎಂದು ಹೇಳಿದರು.

ಮೇಕೆದಾಟು ಅಣೆಕಟ್ಟೆ:  ಮೇಕೆದಾಟಿ­ನಲ್ಲಿ ಕಾವೇರಿ ನದಿಗೆ ಅಣೆಕಟ್ಟೆ ಕಟ್ಟಲು ಅವಕಾಶ ಇದೆ. ಎರಡು ಅಣೆಕಟ್ಟೆಗಳ ಮೂಲಕ ಇಲ್ಲಿ 50 ರಿಂದ 70 ಟಿಎಂಸಿ ನೀರನ್ನು ಸಂಗ್ರಹಿಸಿಡ­-ಬಹುದು. ಈ ಬಗ್ಗೆ ಈಗಾಗಲೇ ಮುಖ್ಯ­ಮಂತ್ರಿಗಳ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT