ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಹಣ: ಎಸ್ಐಟಿ ಮೊದಲ ಸಭೆ

Last Updated 2 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕು­ಗಳಲ್ಲಿ ಭಾರತೀಯರ ಕಪ್ಪುಹಣ ಪ್ರಕರ­ಣದ ತನಿಖೆ ಮಾಡಲು ಕೇಂದ್ರ ರಚಿಸಿ­ರುವ ವಿಶೇಷ ತನಿಖಾ ತಂಡದ ಮೊದಲ ಸಭೆ ಸೋಮವಾರ ನಡೆಯಿತು.

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯ­ಮೂರ್ತಿ ಎಂ.ಬಿ.ಷಾ ನೇತೃತ್ವದ  ಸಮಿ­ತಿಯು, ಕೆಲವೊಂದು ಪ್ರಕರಣಗಳನ್ನು ತ್ವರಿತ ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯನ್ನು ಪರಿಶೀಲಿಸಲು ನಿರ್ಧರಿ­ಸಿತು ಎಂದು ಮೂಲಗಳು ತಿಳಿಸಿವೆ.

‘ಕಪ್ಪುಹಣದ ತನಿಖೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ    ಚರ್ಚಿಸಲಾಯಿತು. ಅಲ್ಲದೇ ತನಿಖೆ ಸಾಗಬೇಕಾದ ಜಾಡಿನ ಕುರಿತು ನಿರ್ಧರಿಸಲಾಯಿತು’ ಎಂದು ಹಣ­ಕಾಸು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಪ್ಪುಹಣ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಬಾಕಿ  ಪ್ರಕರಣಗಳ ಸಂಖ್ಯೆ ಹಾಗೂ ತನಿಖೆಯ ಪ್ರಗತಿಯ ಬಗ್ಗೆ ವರದಿ ಸಲ್ಲಿಸುವಂತೆ  ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಇತರ ತನಿಖಾ ಸಂಸ್ಥೆಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT