ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಆಳ್ವಾಸ್‌ ಕಾಲೇಜಿಗೆ ಪ್ರಶಸ್ತಿ

ಕನಕಪುರದಲ್ಲಿ ನಡೆದ ರಾಜ್ಯಮಟ್ಟದ ಪಂದ್ಯಾವಳಿ
Last Updated 6 ಅಕ್ಟೋಬರ್ 2015, 9:28 IST
ಅಕ್ಷರ ಗಾತ್ರ

ಕನಕಪುರ: ಕ್ರೀಡೆಗಳು ನಮ್ಮಲ್ಲಿ ಛಲ ಮತ್ತು ವಿಶ್ವಾಸ ಮೂಡುತ್ತದೆ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಕಬಡ್ಡಿ ಆಟಗಾರ ಬಿ.ಸಿ.ರಮೇಶ್‌ ಹೇಳಿದರು. ನಗರದ ರೂರಲ್‌ ಕಾಲೇಜು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸ್ಪರ್ಧೆಗಳು ಶಾಲೆಯಿಂದ ಪ್ರಾರಂಭಗೊಂಡು ಹೋಬಳಿ, ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದವರೆಗೂ ನಮ್ಮನ್ನು ಕರೆದುಕೊಂಡು ಹೋಗಿ ನಿಲ್ಲಿಸುತ್ತದೆ. ಕ್ರೀಡೆಯ ಮೇಲೆ ಒಲವು ಮತ್ತು ನಿರಂತರ ಅಭ್ಯಾಸ ಇದ್ದಾಗ ಮಾತ್ರ ನಾವು ನಮ್ಮ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.

ಸಾವಿರಾರು ವರ್ಷಗಳ ಇತಿಹಾಸವಿರುವ ಗ್ರಾಮೀಣ ಕ್ರೀಡೆ ಕಬಡ್ಡಿಗೆ ಸರಿಯಾದ ಪ್ರೋತ್ಸಾಹವಿಲ್ಲದೆ ನಿರ್ಲಕ್ಷಕ್ಕೆ ಒಳಗಾಗಿತ್ತು. ಇತ್ತೀಚಿನ ದಿನಗಳಲ್ಲಿ ಕಬಡ್ಡಿಯು ಪ್ರಮುಖ ಕ್ರೀಡೆಗಳಲ್ಲಿ ಒಂದಾಗಿ ಪ್ರವರ್ಧಮಾನಕ್ಕೆ ಬರುತ್ತಿದೆ. ವಿಶ್ವದೆಲ್ಲೆಡೆ ಕಬಡ್ಡಿಗೆ ಜನ ಆಕರ್ಷಿತರಾಗುತ್ತಿದ್ದಾರೆ. ಶಿಕ್ಷಣ ಇಲಾಖೆಯು ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ದೈಹಿಕ ಶಿಕ್ಷಕರು ಮಕ್ಕಳನ್ನು ಅಣಿಗೊಳಿಸಬೇಕೆಂದು ಹೇಳಿದರು.

ಎರಡು ದಿನ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪುರುಷ ಮತ್ತು ಮಹಿಳಾ ವಿಭಾಗ ಎರಡರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜಿನ ತಂಡ ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಪುರುಷ ವಿಭಾಗದಲ್ಲಿ ರಾಮನಗರ ಜಿಲ್ಲಾ ತಂಡವು, ಮಹಿಳಾ ವಿಭಾಗದಲ್ಲಿ ಮೈಸೂರು ಜಿಲ್ಲಾ ತಂಡವು ಪಡೆದುಕೊಂಡವು.

ಕಬಡ್ಡಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆರ್‌.ಇ.ಎಸ್‌. ಸಂಸ್ಥೆಯ ಅಧ್ಯಕ್ಷ ಕೆ.ಜಿ.ತಿಮ್ಮಪ್ಪ, ಉಪಾಧ್ಯಕ್ಷ ಲಕ್ಷ್ಮಣ್‌, ಕಾರ್ಯದರ್ಶಿ ಸಿ.ರಮೇಶ್‌, ಸಹಕಾರ್ಯದರ್ಶಿ ಎಂ.ನಾಗರಾಜು, ಖಜಾಂಚಿ ಎಂ.ಎಲ್‌.ಶಿವಕುಮಾರ್‌ ಅವರನ್ನು ಸನ್ಮಾನಿಸಿ ಗೌರವಿಸಿತು.

ರಾಜ್ಯ ಮಟ್ಟದ ಪಂದ್ಯಾವಳಿಯನ್ನು ಸಂಸ್ಥೆಯಲ್ಲಿ ನಡೆಸಲು ಅವಕಾಶ ಮಾಡಿಕೊಟ್ಟ ಶಿಕ್ಷಣ ಇಲಾಖೆಯ ನಿರ್ದೇಶಕ ರಮೇಶ್‌ ಅವರನ್ನು ಸಂಸ್ಥೆಯು ಗೌರಿವಿಸಿತು.

***
ಕಬಡ್ಡಿಯು ಪ್ರಮುಖ ಕ್ರೀಡೆಗಳಲ್ಲಿ ಒಂದಾಗಿ ಪ್ರವರ್ಧಮಾನಕ್ಕೆ ಬರುತ್ತಿದೆ. ವಿಶ್ವದೆಲ್ಲೆಡೆ ಕಬಡ್ಡಿಗೆ ಜನ ಆಕರ್ಷಿತರಾಗುತ್ತಿದ್ದಾರೆ.
-ಬಿ.ಸಿ.ರಮೇಶ್‌,
ಕಬಡ್ಡಿ ಆಟಗಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT