ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗುತ್ತಿವೆ ಬೆಟ್ಟಗಳು

ಅಕ್ಷರ ಗಾತ್ರ

ಸುಸ್ಥಿರ ಅಭಿವೃದ್ಧಿಯ ಬಗ್ಗೆ ನಾವು ಬಹಳ ಹಿಂದಿನಿಂದಲೂ ಮಾತನಾಡುತ್ತಿದ್ದೇವೆ. ಆದರೆ ಈ ವಿಷಯದಲ್ಲಿ ಪ್ರಗತಿ ಸಾಧಿಸಲು ಮಾತ್ರ ಸಾಧ್ಯವಾಗಿಲ್ಲ.

ಸುಸ್ಥಿರ ಅಭಿವೃದ್ಧಿ ಎಂದರೆ ನೈಸರ್ಗಿಕ ಸಂಪನ್ಮೂಲಗಳನ್ನು ಮುಂದಿನ ಪೀಳಿಗೆಗೆ ಕೂಡ ಉಳಿಸುವುದು. ಅಭಿವೃದ್ಧಿಯ ಪಥದಲ್ಲಿ ನಾವು ನೈಸರ್ಗಿಕ ಸಂಪನ್ಮೂಲಗಳನ್ನು ನಾಶಪಡಿಸುತ್ತಿದ್ದೇವೆ. ಅದರಲ್ಲೂ ರಸ್ತೆ ಅಭಿವೃದ್ಧಿ, ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಾದ ಜಲ್ಲಿ, ಚಪ್ಪಡಿ, ಪಾಯದ ಕಲ್ಲುಗಳಿಗಾಗಿ ಬೆಟ್ಟ ಗುಡ್ಡಗಳನ್ನು ಪುಡಿಪುಡಿ ಮಾಡುತ್ತಿದ್ದೇವೆ. ಇದರಿಂದ ಮುಂದೆ ನಾವು ನೈಸರ್ಗಿಕ ವಿಕೋಪಕ್ಕೆ ಒಳಗಾಗುವ ಸಂಭವ ಹೆಚ್ಚಾಗಿರುತ್ತದೆ.

ಇಂತಹ ಅನಾಹುತಗಳನ್ನು ತಡೆಯಲು ಸುಸ್ಥಿರ ಅಭಿವೃದ್ಧಿಯ ಅರ್ಥವನ್ನು ಇನ್ನಾದರೂ ಪ್ರತಿಯೊಬ್ಬರೂ ಸರಿಯಾಗಿ ಮನಗಂಡು ಕಾರ್ಯರೂಪಕ್ಕೆ ತರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT