ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರುಣಾನಿಧಿ, ಸ್ಟಾಲಿನ್ ವಿರುದ್ಧ ಎಫ್‌ಐಆರ್‌

ಡಿಎಂಕೆ–ಎಐಎಡಿಎಂಕೆ ಕಾರ್ಯಕರ್ತರ ಸಂಘರ್ಷ
Last Updated 28 ಸೆಪ್ಟೆಂಬರ್ 2014, 10:30 IST
ಅಕ್ಷರ ಗಾತ್ರ

ಚೆನ್ನೈ(ಪಿಟಿಐ): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಶಿಕ್ಷೆಯಾದ ಹಿನ್ನೆಲೆಯಲ್ಲಿ  ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರ ನಡುವೆ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಡಿಎಂಕೆ ಪಕ್ಷ ವರಿಷ್ಠ ಎಂ.ಕರುಣಾನಿಧಿ ಹಾಗೂ ಪಕ್ಷದ ಖಜಾಂಚಿ ಎಂ.ಕೆ.ಸ್ಟಾಲಿನ್ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಗೋಪಾಲಪುರಂದಲ್ಲಿರುವ ಕರುಣಾನಿಧಿ ನಿವಾಸ ಬಳಿ ಡಿಎಂಕೆ ಕಾರ್ಯಕರ್ತರು ಮಾರಕಾಸ್ತ್ರಗಳೊಂದಿಗೆ ತಮ್ಮ ಮೇಲೆ ದಾಳಿ ನಡೆಸಿದರು ಎಂದು ಆರೋಪಿಸಿ ಎಐಎಡಿಎಂಕೆ ಕಾರ್ಯಕರ್ತರು ನೀಡಿದ ದೂರಿನಡಿ ರೊಯಪೆಟ್ಟಾ ಪೊಲೀಸ್‌ ಠಾಣೆಯಲ್ಲಿ ಕರುಣಾನಿಧಿ ಹಾಗೂ ಸ್ಟಾಲಿನ್‌ ಸೇರಿದಂತೆ ಇತರ ಹಲವರ ವಿರುದ್ಧ ಶನಿವಾರ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಕಲಂ 147, 148, 324, 336 ಹಾಗೂ 506/2ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಜಯಲಲಿತಾ ಅವರು ಜೈಲು ಸೇರಲು ಡಿಎಂಕೆ ನಾಯಕರೆ ಕಾರಣ ಎಂದು ಆರೋಪಿಸಿ ಎಐಎಡಿಎಂಕೆ ಕಾರ್ಯಕರ್ತರು ಪ್ರತಿಭಟನೆಗಿಳಿದಾಗ ಘರ್ಷಣೆ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT