ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಂದ್: ರಾಜ್ಯದಾದ್ಯಂತ ಪ್ರತಿಭಟನೆಯ ಕಾವು, ಮೆಟ್ರೋ ರೈಲು ಸ್ಥಗಿತ

Last Updated 30 ಜುಲೈ 2016, 6:08 IST
ಅಕ್ಷರ ಗಾತ್ರ

ಬೆಂಗಳೂರು : ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಇದಕ್ಕೆ ತಡೆಯೊಡ್ಡಿದ್ದಾರೆ. ಅದೇ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೂ ಕರವೇ ಕಾರ್ಯಕರ್ತರು ತಡೆಯೊಡ್ಡಿದ್ದು ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಂಡಿದೆ.

ಬೆಳಗ್ಗೆ  ಬೆಂಗಳೂರಿನ ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗದಲ್ಲಿ ಬೆಳಗ್ಗೆ ಮೆಟ್ರೋ ಸಂಚಾರ ಆರಂಭವಾಗಿತ್ತು. ಆದರೆ 7 ಗಂಟೆಯ ವೇಳೆಗೆ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರೈಲಿಗೆ ತಡೆಯೊಡ್ಡಿದ್ದಾರೆ. ಇತ್ತ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಲ್ಲೂ  ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಬಿಎಂಟಿಸಿಯ ವೊಲ್ವೋ ಬಸ್ ಸಂಚಾರವೂ ಸ್ಥಗಿತಗೊಂಡಿದ್ದು, ಸಿಟಿ ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾರವಾರದಲ್ಲೂ ಉತ್ತಮ ಪ್ರತಿಕ್ರಿಯೆ: ಕರ್ನಾಟಕ ಬಂದ್‍ಗೆ ಕಾರವಾರದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ. ಸಾರಿಗೆ ಬಸ್ ಸಂಚಾರ ಸ್ತಬ್ಧವಾಗಿದ್ದು ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ, ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT