ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಪ್ರತಿಪಕ್ಷ ನಾಯಕ ಸ್ಥಾನ ಇಲ್ಲ: ಸ್ಪೀಕರ್

Last Updated 19 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕನ ಮಾನ್ಯತೆ ನೀಡಬೇಕೆಂಬ ಬೇಡಿಕೆಯನ್ನು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಮಂಗಳವಾರ ತಿರಸ್ಕರಿಸಿದ್ದಾರೆ.

‘ಸದನದ ನಿಯಮಗಳು ಹಾಗೂ ಸಂಪ್ರದಾಯಗಳನ್ನು ಪರಿಶೀ­ಲಿ­ಸಿ ಮಲ್ಲಿ­ಕಾರ್ಜುನ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕನ ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದಿ­ದ್ದೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಬೇಡಿಕೆಯನ್ನು ತಿರಸ್ಕರಿಸಿ­ರುವ ಸ್ಪೀಕರ್‌ ನಿರ್ಧಾರವನ್ನು ಅಧಿಕೃತ­ವಾಗಿ ತಿಳಿಸಲಾಗಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಪೀಕ­ರ್‌ಗೆ ಪತ್ರ ಬರೆದು, ಖರ್ಗೆ ಅವರಿಗೆ ವಿರೋಧ ಪಕ್ಷದ ಮಾನ್ಯತೆ ನೀಡ­ಬೇಕೆಂದು ಒತ್ತಾಯಿಸಿದ್ದರು.

ತೀರ್ಮಾನ ನೋಡಿಲ್ಲ–ಖರ್ಗೆ: ‘ನನಗೆ ವಿರೋಧ ಪಕ್ಷದ ನಾಯಕನ ಸ್ಥಾನ­ಮಾನ ನೀಡುವ ಸಂಬಂಧ ಸ್ಪೀಕರ್‌ ಅಧಿ­ಕೃ­ತವಾಗಿ ಕೈಗೊಂಡಿರುವ ತೀರ್ಮಾ­ನ­ವನ್ನು ಇನ್ನೂ ನೋಡಿಲ್ಲ. ನಾನು ಗುಲ್ಬರ್ಗಾ ಪ್ರವಾಸದ­ಲ್ಲಿದ್ದೇನೆ’ ಎಂದು ಖರ್ಗೆ ‘ಪ್ರಜಾವಾಣಿ’ಗೆ ತಿಳಿಸಿದರು.
ಈ ವಿಷಯದಲ್ಲಿ ಮುಂದಿನ ಹೆಜ್ಜೆ ಕುರಿತು ಹೈಕಮಾಂಡ್‌ ತೀರ್ಮಾನಿಸ­ಲಿದೆ. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ­ರುವೆ ಎಂದು ಖರ್ಗೆ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT