ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಗಳ ಬಿರುಸಿನ ಪ್ರಚಾರ

Last Updated 15 ಏಪ್ರಿಲ್ 2014, 19:44 IST
ಅಕ್ಷರ ಗಾತ್ರ

ಬೆಂಗಳೂರು: ಬಹಿರಂಗ ಪ್ರಚಾರದ ಕೊನೆಯ ದಿನವಾದ ಮಂಗಳವಾರ ನಗರದ ಮೂರು ಲೋಕಸಭಾ ಕ್ಷೇತ್ರ­ಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದರು.

ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಂದನ್‌ ನಿಲೇಕಣಿ ಅವರು ಬೆಳಿಗ್ಗೆ ಎಚ್.ಎಸ್.ಆರ್. ಬಡಾವಣೆ­ಯಲ್ಲಿ ಗಾರ್ಮೆಂಟ್ ಫ್ಯಾಕ್ಟರಿಗೆ ಭೇಟಿ ನೀಡಿ, ಅಲ್ಲಿಯ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ತಾವರೆಕೆರೆ­ಯಲ್ಲಿ ರೋಡ್ ಷೋ ನಡೆಸಿದರು.

‘ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಶುದ್ಧಹಸ್ತದ, ಸಾಮರ್ಥ್ಯವಿರುವ ಹಾಗೂ ಕೊಟ್ಟ ಮಾತನ್ನು ಈಡೇರಿ­ಸುವಂತಹ ವ್ಯಕ್ತಿಯನ್ನು ಆಯ್ಕೆ ಮಾಡಲು ಇದು ಸಕಾಲ’ ಎಂದು ಹೇಳಿದರು.

‘ಇದು ನಮಗೊಂದು ಸದವಕಾಶ. ನಾವು ಬೆಂಗಳೂರಿನ ಹಿಂದಿನ ವೈಭವ­ವನ್ನು ಮರಳಿ ತರಬೇಕಿದೆ. ನಮ್ಮ ನಗರಕ್ಕೆ ಹೆಚ್ಚು ಉದ್ಯೋಗಾ­ವಕಾಶ­ಗಳು, ಉತ್ತಮ ರಸ್ತೆಗಳ ಅಗತ್ಯ ಇದೆ. ಈ ನಿಟ್ಟಿನಲ್ಲಿ ತುರ್ತಾಗಿ ಕೆಲಸ ಮಾಡಬೇಕಿದೆ’ ಎಂದರು.

ಬಳಿಕ ಕೋರಮಂಗಲದ ವಿವಿಧ ಬಡಾವಣೆಗಳಲ್ಲಿ ರೋಡ್‌ ಷೋ ನಡೆಸಿದರು. ಸಂಜೆ ದೇವೇಗೌಡ ಪೆಟ್ರೋಲ್‌ ಬಂಕ್‌ ಹತ್ತಿರದ ಕಾರ್ಮೆಲ್‌ ಶಾಲೆಯ ಮೈದಾನದಲ್ಲಿ ಕೊನೆಯ ಬಹಿರಂಗ ಪ್ರಚಾರ ನಡೆಸಿದರು.  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ನಾರಾಯಣಸ್ವಾಮಿ ಅವರು ಹೆಬ್ಬಾಳ ಹಾಗೂ ಆಸುಪಾಸಿನ ಪ್ರದೇಶದಲ್ಲಿ ರೋಡ್‌ ಷೋ ನಡೆಸಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT