ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧ

Last Updated 27 ಜುಲೈ 2016, 11:47 IST
ಅಕ್ಷರ ಗಾತ್ರ

ಬೆಳಗಾವಿ: ಮಹಾದಾಯಿ ನ್ಯಾಯಮಂಡಳಿ ತೀರ್ಪಿನ ಬಳಿಕ ಕಳಸಾ ನಾಲೆಯ ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ದೇವಸ್ಥಾನದಿಂದ ಲೋಕೋಪಯೋಗಿ ಇಲಾಖೆಯ ಪ್ರವಾಸಿಮಂದಿರದ ಹಿಂಭಾಗದವರೆಗಿನ ಕಳಸಾ ನಾಲೆ ಕಾಮಗಾರಿ ನಡೆಯುತ್ತಿರುವ ಸ್ಥಳ ಹಾಗೂ ಅದರ ದಂಡೆಯ ಸುತ್ತಮುತ್ತಲಿನ 1 ಕಿ.ಮೀ. ಒಳಗಿನ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎನ್. ಜಯರಾಮ್ ಆದೇಶ ಹೊರಡಿಸಿದ್ದಾರೆ.

ಲಾಠಿ ಪ್ರಹಾರ: ನ್ಯಾಯಮಂಡಳಿ ತೀರ್ಪನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕೆಲವೆಡೆ ಹಿಂಸಾಚಾರದ ಸ್ವರೂಪ ಪಡೆಯುತ್ತಿದೆ. ನವಲಗುಂದದ ಹುಬ್ಬಳ್ಳಿ ರಸ್ತೆ ಬಳಿ ಪ್ರತಿಭಟನಾನಿರತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ರೈತರು, ಪತ್ರಕರ್ತರು ಅಸ್ವಸ್ಥಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT