ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಪಿಡಿಪಿ, ಜಾರ್ಖಂಡ್‌ನಲ್ಲಿ ಬಿಜೆಪಿ ಮುನ್ನಡೆ

Last Updated 23 ಡಿಸೆಂಬರ್ 2014, 7:41 IST
ಅಕ್ಷರ ಗಾತ್ರ

ಶ್ರೀನಗರ/ರಾಂಚಿ (ಪಿಟಿಐ/ಐಎಎನ್ಎಸ್): ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕ್ರಮವಾಗಿ ಐದು ಹಾಗೂ ಒಂದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಮತ್ತೊಂದೆಡೆ, ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಮುನ್ನಡೆ ಹೊಂದಿದ್ದರೆ ಜಾರ್ಖಂಡ್ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಮಧ್ಯಾಹ್ನ 1 ಗಂಟೆಯ ವರೆಗಿನ ಮತ ಎಣಿಕೆಯ ಅಂಕಿ-ಸಂಖ್ಯೆಗಳ ಪ್ರಕಾರ, ರಾಜ್ಯದಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 2 ಸ್ಥಾನಗಳಲ್ಲಿ ಗೆದ್ದಿರುವ ಪಿಡಿಪಿ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ಆಡಳಿತಾರೂಢ ನ್ಯಾಷನಲ್ ಕಾನ್ಫೆರೆನ್ಸ್ ಪಕ್ಷವು ಒಂದು ಸ್ಥಾನ ಗೆದ್ದಿದ್ದು, 10 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಕಾಂಗ್ರೆಸ್ ಪಕ್ಷವು 12 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಜಾರ್ಖಂಡ್ ವರದಿ: ಇನ್ನುಜಾರ್ಖಂಡ್ ರಾಜ್ಯದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ಒಂದು ಸ್ಥಾನ ಗೆದ್ದುಕೊಂಡಿದ್ದು, 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿಯು 35 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಆರಂಭದಲ್ಲಿ 8 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದ ಜಾರ್ಖಂಡ್ ವಿಕಾಸ ಮೋರ್ಚಾ ಪಕ್ಷವು ಸದ್ಯ 6 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ.

ಜಮ್ಮು-ಕಾಶ್ಮೀರದ 87 ಹಾಗೂ ಜಾರ್ಖಂಡ್ ನ 81 ಸ್ಥಾನಗಳಿಗೆ ಐದು ಹಂತಗಳಲ್ಲಿ ಚುನಾವಣೆ ನಡೆದಿತ್ತು.

ಕ್ಷಣಕ್ಷಣದ ಮಾಹಿತಿಗೆ: http://eciresults.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT