ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ, ಜಾರ್ಖಂಡ್‌ ಇಂದು ಚುನಾವಣಾ ಫಲಿತಾಂಶ ಪ್ರಕಟ

Last Updated 22 ಡಿಸೆಂಬರ್ 2014, 19:36 IST
ಅಕ್ಷರ ಗಾತ್ರ

ಶ್ರೀನಗರ/ರಾಂಚಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ (ಡಿ.23) ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

‘ಬೆಳಿಗ್ಗೆ 8ಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಎಣಿಕಾ ಕೇಂದ್ರ­ಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ’ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಮತ್ತು ಪ್ರಮುಖ ವಿರೋಧ ಪಕ್ಷ ಪಿಡಿಪಿಯ ಮುಖ್ಯಮಂತ್ರಿ ಅಭ್ಯರ್ಥಿ ಮುಫ್ತಿ ಮೊಹಮ್ಮದ್‌ ಸಯೀದ್‌ ಸೇರಿ  ಒಟ್ಟು 821 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಈ ರಾಜ್ಯದಲ್ಲಿ 87 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು,  ಹೆಚ್ಚಿನ ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಜಾರ್ಖಂಡ್‌ನ 81 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ 111 ಮಹಿಳೆಯರು ಸೇರಿ ಒಟ್ಟು 1,136 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಶೇ 66ರಷ್ಟು ಮತದಾನ ಆಗಿದೆ.

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಅಧಿಕಾರ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದೆ. ಆದರೆ, ಮುಖ್ಯಮಂತ್ರಿ ಹೇಮಂತ್‌ ಸುರೇನ್‌ಗೆ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಈ ಎರಡೂ ರಾಜ್ಯಗಳಲ್ಲಿ ಐದು ಹಂತದಲ್ಲಿ ಮತದಾನ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT