ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಪ್ರವಾಹ: ಸೇನಾ ನೆರವಿಗೆ ಮುಫ್ತಿ ಮನವಿ

Last Updated 30 ಮಾರ್ಚ್ 2015, 11:09 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಪ್ರವಾಹ ಪೀಡಿತ ಜಮ್ಮು– ಕಾಶ್ಮೀರದಲ್ಲಿ ಪರಿಹಾರ ಕಾರ್ಯಕ್ಕಾಗಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಅವರು ಸೇನಾ ನೆರವು ಕೋರಿದ್ದಾರೆ.

ರಕ್ಷಣಾ ಕಾರ್ಯ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ನಡೆದಿರುವ ಸಭೆಯಲ್ಲಿ ಸೇನಾಧಿಕಾರಿಗಳು ಕಾರ್ಯಾಚರಣೆಗೆ ಸೇನಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (ಎಸ್‌ಡಿಆರ್‌ಎಫ್‌) ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಮುಫ್ತಿ ಸೇನಾಧಿಕಾರಿಗಳಿಗೆ ತಿಳಿಸಿದ್ದಾರೆ.

‘ರಾಜ್ಯ ಸರ್ಕಾರ ಈಗಾಗಲೇ ಪರಿಹಾರ ಕಾರ್ಯದಲ್ಲಿ ತೊಡಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕರೆತರುವುದು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ’ ಎಂದು ಮುಫ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT