ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ಸೇನಾಶಿಬಿರದ ಮೇಲೆ ದಾಳಿ; ಇಬ್ಬರಿಗೆ ಗಾಯ

Last Updated 25 ನವೆಂಬರ್ 2015, 7:04 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ತಂಗಧಾರ್‌ ವಲಯದಲ್ಲಿ ಸೇನಾ ಶಿಬಿರದ ಮೇಲೆ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಸಮೀಪದ ಸೇನಾ ಶಿಬಿರದ ಮೇಲೆ ಬುಧವಾರ ಮುಂಜಾನೆ 6.15 ನಿಮಿಷಕ್ಕೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಕೆಲ ವಾಹನಗಳಿಗೆ ಬೆಂಕಿ ತಗುಲಿ ಸುಟ್ಟಿವೆ ಎಂದು ಸೇನಾ ಮೂಲಗಳು ಹೇಳಿವೆ.

‘ದಾಳಿ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ’ ಎಂದೂ ಮೂಲಗಳು ಹೇಳಿವೆ.

ದಾಳಿಯ ವೇಳೆ ಚಿಕ್ಕ ಸ್ಪೋಟಕ ಹಾಗೂ ಯುಬಿಜಿಎಲ್‌ಗಳನ್ನು (ಅಂಡರ್ ಬ್ಯಾರೆಲ್ ಗ್ರೇನೆಡ್ ಲಾಂಚರ್‌) ಬಳಕೆಯಾಗಿದ್ದು, ಉಗ್ರರ ಬಳಿ ಅ‍ಪಾರ ಶಸ್ತ್ರಾಸ್ತ್ರಗಳಿರುವಂತಿದೆ ಎಂದು ಸೇನಾ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

‘ತಂಗಧಾರ್‌ ವಲಯದ ಕಲ್ಸುರಿ ಪರ್ವತದ ಕಡೆಯಿಂದ ಬುಧವಾರ ಮುಂಜಾನೆ ಸೇನಾ ಶಿಬಿರದ ಮೇಲೆ ದಾಳಿ ನಡೆದಿದೆ’ ಎಂದೂ ಆ ಅಧಿಕಾರಿ ಹೇಳಿದ್ದಾರೆ.

ಸ್ಫೋಟಕ ವಶ: ಮತ್ತೊಂದೆಡೆ, ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಉಗ್ರರ ಅಡಗುತಾಣದ ಮೇಲೆ ದಾಳಿ ನಡೆಸಿರುವ ಭದ್ರತಾ ಪಡೆಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಇಲ್ಲಿನ ಸಲಾನಿ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯ ನಡೆಸಿದ್ದರು. ಕಾರ್ಯಾಚರಣೆಯಲ್ಲಿ 3 ಸುಧಾರಿತ ಸ್ಫೋಟಕ ಸಾಧನಗಳು, ಎರಡು ಎ.ಕೆ.ಮ್ಯಾಗಜಿನ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ವಕ್ತಾರೊಬ್ಬರು ಬುಧವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT