ಶಿರಸಿ (ಉತ್ತರ ಕನ್ನಡ): ಯಲ್ಲಾಪುರ ತಾಲ್ಲೂಕಿನ ಮಂಚಿಕೇರಿಯ ಪಿ.ಎನ್. ಶಾಸ್ತ್ರಿ ಜೋಗಭಟ್ಟರಕೇರಿ ಅವರು ನವದೆಹಲಿಯ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಕುಲಪತಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.
ಮೈಸೂರು, ಉಡುಪಿಯಲ್ಲಿ ಸಂಸ್ಕೃತ ಅಧ್ಯಯನ ಮಾಡಿದ್ದ ಅವರು ಸಂಸ್ಕೃತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ವೈದಿಕ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿ ಯಾಗಿರುವ ಅವರನ್ನು ಸಂಸ್ಥೆ ಅಭಿನಂದಿಸಿದೆ.