ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಯಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಿ

Last Updated 30 ಏಪ್ರಿಲ್ 2016, 8:29 IST
ಅಕ್ಷರ ಗಾತ್ರ

ಮಡಿಕೇರಿ: ರೈತರು ಕೃಷಿಯಲ್ಲಿ ಹೊಸ ಪದ್ದತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಗಮನ ಹರಿಸಬೇಕು ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಸಲಹೆ ಮಾಡಿದರು.  ನಬಾರ್ಡ್ ವತಿಯಿಂದ ವಿರಾಜಪೇಟೆ ಬಳಿಯ ಕ್ಲಬ್ ಮಹೇಂದ್ರದಲ್ಲಿ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಹೊಸ ಪದ್ಧತಿ ಕುರಿತು ಶುಕ್ರವಾರ ನಡೆದ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಕೃಷಿ ಮಾರುಕಟ್ಟೆಯಲ್ಲಿ ನೂತನ ಆವಿಸ್ಕಾರಗಳನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವಲ್ಲಿ ಮಾರುಕಟ್ಟೆ ವ್ಯವಸ್ಥೆಯಲ್ಲ್ಲಿ ಬದಲಾವಣೆ ತರಲಾಗಿದೆ. ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ರೈತರಿಗೆ ಅನೂಕೂಲವಾಗುವಲ್ಲಿ ಕೃಷಿ ಮಾರಾಟ ನೀತಿಯನ್ನು ಜಾರಿಗೊಳಿಸಿದ್ದು, ದೇಶಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ವಿವಿಧ ನಿಯಂತ್ರಿತ ಮಾರುಕಟ್ಟೆಗಳು ಹಾಗೂ ಗೋದಾಮುಗಳ ಜೋಡಣೆ ಮಾಡುವುದರ ಮೂಲಕ ಮಾರುಕಟ್ಟೆಗಳ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನಗಳ ಹರಾಜು ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ವಾತಾವರಣ ನಿರ್ಮಿಸಲಾಗಿದೆ. ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಪಡೆಯುವ ಸಾಮಥ್ರ್ಯ ಹೆಚ್ಚಿಸಲು ಗ್ರಾಮೀಣ ಹಂತದಲ್ಲಿ ಉತ್ಪನ್ನಗಳನ್ನು ಒಟ್ಟುಗೂಡಿಸಿ ರೈತರ ಅಭಿವೃದ್ದಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ನಬಾರ್ಡ್‌ ಬ್ಯಾಂಕುಗಳು ಗ್ರಾಮೀಣ ಪ್ರದೇಶದಲ್ಲಿರುವ ರೈತರಿಗೆ ಪ್ರೋತ್ಸಾಹ ನೀಡುವಲ್ಲಿ ರೈತಪರ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿದೆ. ರೈತರಿಗೆ ತಾವು ಉತ್ಪಾಧಿಸಿದ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರೆಯಲಿದ್ದು, ರೈತರ ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ದಿ ಕಾಣಬಹುದಾಗಿದೆ ಎಂದರು. 

ಕಾರ್ಯಗಾರದಲ್ಲಿ ನಬಾರ್ಡ್‌ ಮುಖ್ಯಸ್ಥ ಹರ್ಷಕುಮಾರ್ ಬಾನುವಾಲ, ನಬಾರ್ಡ್‌ ಡೆಫ್ಯೊಟಿ ಮ್ಯಾನೇಜಿಂಗ್ ಡೈರೆಕ್ಟರ್‌ ಎಚ್.ಆರ್. ದವೆ, ಮತ್ತು ಅಮಲೂರು ಪವನ್ನಾತನ್ ಕಾರ್ಯಗಾರದಲ್ಲಿ ಹಲವಾರು ಸಲಹೆ ನೀಡಿದರು. ವಿವಿಧ ರಾಜ್ಯಗಳಿಂದ ಆಗಮಿಸಿದ ನಬಾರ್ಡ್‌ನ ಪ್ರಾದೇಶಿಕ ಮುಖ್ಯ ಪ್ರಬಂಧಕರು ಹಾಗೂ  ಆಡಳಿತ ಕಚೇರಿಯ ಮುಖ್ಯಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT