ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣ ಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಖುಲಾಸೆ

Last Updated 25 ಜುಲೈ 2016, 5:52 IST
ಅಕ್ಷರ ಗಾತ್ರ

ಜೋಧಪುರ್ (ಪಿಟಿಐ) : ಶೂಟಿಂಗ್ ವೇಳೆ  ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಕಾಯ್ದೆ  (ಪರವಾನಗಿ ಅವಧಿ ಮುಗಿದ ನಂತರವೂ  ಶಸ್ತ್ರಾಸ್ತ್ರ ಇಟ್ಟುಕೊಳ್ಳುವುದು ಹಾಗೂ ಬಳಸುವುದು) ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸೋಮವಾರ ಖುಲಾಸೆಗೊಳಿಸಿದೆ.

ಏನಿದು ಪ್ರಕರಣ?: 1998ರಲ್ಲಿ ಹಮ್  ಸಾಥ್ ಸಾಥ್  ಹೈ ಸಿನಿಮಾ ಶೂಟಿಂಗ್​ ವೇಳೆ  ಜೋಧ್‍ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಕೃಷ್ಣಮೃಗ ಬೇಟೆಯಾಡಿದ್ದರು. ರಕ್ಷಿತ ಅರಣ್ಯ ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್​ ಖಾನ್​ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ಪ್ರಕರಣದಲ್ಲಿ ಸಲ್ಮಾನ್ ಖಾನ್ 2006 ರ ಏಪ್ರಿಲ್ ಮತ್ತು 2007ರ ಆಗಸ್ಟ್​​ನಲ್ಲಿ ಜೈಲುವಾಸ ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT