ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌ ಆಕಾಂಕ್ಷಿಗಳ ಪ್ರತಿಭಟನೆ

ವಯೋಮಿತಿ ವಿಸ್ತರಣೆಗೆ ಒತ್ತಾಯ
Last Updated 17 ಸೆಪ್ಟೆಂಬರ್ 2014, 19:48 IST
ಅಕ್ಷರ ಗಾತ್ರ

ಬೆಂಗಳೂರು: ಹೊಸದಾಗಿ 452 ಕೆಎಎಸ್ ಹುದ್ದೆಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ, 2011ರ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ವಂಚಿತರಾದ ಅಭ್ಯರ್ಥಿ-ಗಳಿಗೂ ಗರಿಷ್ಠ ವಯೋಮಿತಿ ಸಡಿಲಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದ-ಸ್ಯರು ನಗರದ ಆನಂದರಾವ್‌ ವೃತ್ತ-ದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

‘ವಯೋಮಿತಿ ಮೀರಿರುವ ಅಭ್ಯರ್ಥಿ-ಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿ-ನಲ್ಲಿ ಕೇಂದ್ರ ಸರ್ಕಾರ ಯುಪಿಎಸ್‌ಸಿ ಪರೀಕ್ಷೆ ಬರೆಯಲು ಗರಿಷ್ಠ ವಯೋಮಿತಿ-ಯನ್ನು ಎರಡು ವರ್ಷ ಹೆಚ್ಚಳ ಮಾಡಿದೆ.

ಅದೇ ರೀತಿ ರಾಜ್ಯ ಸರ್ಕಾರವೂ 2011ರಲ್ಲಿ ಕೆಎಎಸ್ ಪರೀಕ್ಷೆ ಬರೆದು ವಯೋಮಿತಿ ಮೀರಿರುವ ನೊಂದ ಆಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ದಲಿತ ಪದವೀಧರ ಸಂಘದ ಅಧ್ಯಕ್ಷ ವಿ. ಲೋಕೇಶ್ ಅವರು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ, ಭಾರತ ವಿದ್ಯಾರ್ಥಿ ಒಕ್ಕೂಟ, ನವಭಾರತ ನಿರ್ಮಾಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT