ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಅಧ್ಯಕ್ಷರ ನೇಮಕಕ್ಕೆ 1 ತಿಂಗಳು ಹೈಕೋರ್ಟ್‌ ತಡೆ

Last Updated 1 ಸೆಪ್ಟೆಂಬರ್ 2015, 10:57 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಮುಂದಿನ 1 ತಿಂಗಳ ಕಾಲ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತಿಲ್ಲ ಎಂದು ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ ಮುಖರ್ಜಿ ಮತ್ತು ಬಿ.ವಿ ನಾಗರತ್ನ ಅವರನ್ನೊಳಗೊಂಡ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಪ್ರೊ. ರವಿವರ್ಮ ಕುಮಾರ್‌ ಅವರು, ‘ಸರ್ಕಾರಕ್ಕೆ ಸುಮಾರು 800 ಹುದ್ದೆಗಳನ್ನು ತುಂಬುವ ಜರೂರ­ತ್ತಿದೆ. ಆದ್ದರಿಂದ ನೇಮಕಕ್ಕೆ ಅವಕಾಶ ಕೊಡಬೇಕು. ಒಂದು ವೇಳೆ ತನಿಖೆ ನಡೆದು ಪಟ್ಟಿಯಲ್ಲಿರುವ ವ್ಯಕ್ತಿಗಳು ಅಪರಾಧಿ ಎಂದು ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಸ್ಪಷ್ಟನೆ ನೀಡಿದರು.  ಆದರೆ, ಕೋರ್ಟ್‌ ಈ ವಾದವನ್ನು ತಳ್ಳಿಹಾಕಿತು.

ಕೆಪಿಎಸ್‌ಸಿಗೆ ನೇಮಕ ಮಾಡಲು ಸರ್ಕಾರ ಕಳಿಸಿದ ಪಟ್ಟಿಯಲ್ಲಿ ಇರುವ ವ್ಯಕ್ತಿಗಳು ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅನರ್ಹರು. ಆದ್ದರಿಂದ ನೇಮಕಕ್ಕೆ ಅವಕಾಶ ನೀಡಬಾರದು ಎಂದು ಟಿ.ಜೆ ಅಬ್ರಹಾಂ ಕೋರ್ಟ್  ಮೊರೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT