ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಪುನರುಜ್ಜೀವನಕ್ಕೆ ಸಿ.ಎಂಗೆ ಮನವಿ

Last Updated 19 ಡಿಸೆಂಬರ್ 2014, 7:03 IST
ಅಕ್ಷರ ಗಾತ್ರ

ವಿಜಯಪುರ: ನಗರಕ್ಕೆ ಈಚೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಜಯಪುರ ಜಿಲ್ಲಾ ವಿಕಾಸ ವೇದಿಕೆ ವತಿಯಿಂದ ರಾಮಲಿಂಗ ಕೆರೆ ಪುನರುಜ್ಜೀವನಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ರಾಮಲಿಂಗ ಕೆರೆ 1800 ಎಕರೆಗಳಷ್ಟು ವಿಸ್ತಾರ ಹೊಂದಿದೆ. ಈ ಭೂಮಿ ಇದೀಗ ಪಟ್ಟಭದ್ರ ಹಿತಾಸಕ್ತಿಗಳ ಕೈವಶಕ್ಕೀಡಾಗಿದ್ದು, ಸಂಪೂರ್ಣ ಕೆರೆ ನಾಶವಾಗುತ್ತಿದೆ. ಈ ಸಾರ್ವಜನಿಕ ಕೆರೆ ರಕ್ಷಿಸಬೇಕು ಎಂದು ನಗರದಲ್ಲಿ ಈ ಹಿಂದೆ ಜನ ಸಂಪರ್ಕ ಸಭೆ ನಡೆಸಿದಾಗ ಮನವಿ ಮಾಡಿಕೊಳ್ಳಲಾಗಿತ್ತು.

ಇದರ ಜತೆಗೆ ಮಾನವ ಹಕ್ಕು ಆಯೋಗ, ಜಿಲ್ಲಾಡಳಿತ, ಕೇಂದ್ರ ಸರ್ಕಾರ, ಸ್ಥಳೀಯ ಸಚಿವರು, ಶಾಸಕರಿಗೆ ಮನವಿ ಮಾಡಿಕೊಂಡರೂ ಪ್ರಯೋಜನ­ವಾಗಿಲ್ಲ. ಇದರ ಜತೆಗೆ ಸರ್ಕಾರದ ನಿರ್ಲಕ್ಷ್ಯದಿಂದ 10ಕ್ಕೂ ಹೆಚ್ಚು ಐತಿಹಾಸಿಕ ಕೆರೆಗಳು ವಿನಾಶದ ಅಂಚಿನಲ್ಲಿವೆ. ಸುಪ್ರೀಂಕೋರ್ಟ್‌ ಆದೇಶದಂತೆ ಈ ಐತಿಹಾಸಿಕ ರಾಮಲಿಂಗ ಕೆರೆ ಸಂರಕ್ಷಿಸಿ ಪುನರು­ಜ್ಜೀವನಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ವಿಕಾಸ ವೇದಿಕೆ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ವಿನಂತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT