ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ವಿದ್ಯಾಲಯ: ಶಿಕ್ಷಕರ ಹುದ್ದೆ ಖಾಲಿ

Last Updated 26 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ದೇಶದಾದ್ಯಂತ ಹಲವು ಕೇಂದ್ರೀಯ ವಿದ್ಯಾಲಯಗಳಲ್ಲಿ 7500ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಲೋಕ­ಸಭೆಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ದೇಶದಲ್ಲಿರುವ 1,102 ಕೇಂದ್ರೀಯ ವಿದ್ಯಾಲಯಗಳಲ್ಲಿ ಒಟ್ಟು 7,556 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೇಂದ್ರೀಯ ವಿದ್ಯಾಲಯ ಸಂಘ­ಟನೆಯು ಇತ್ತೀಚೆಗಷ್ಟೇ 3,837 ಶಿಕ್ಷಕ­ರನ್ನು ನೇಮಕ ಮಾಡಿಕೊಂಡಿತ್ತು. ಅಲ್ಲದೆ 1,797 ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ಗುತ್ತಿಗೆ ಆಧಾರ­ದಲ್ಲಿ 5,814 ಶಿಕ್ಷಕರನ್ನು ನೇಮಿಸಿ­ಕೊಳ್ಳ­ಲಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಿಲ್ಲ’ ಎಂದು ಅವರು ವಿವರಣೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT