ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆ ಬಾವಿಗೆ ಬಿದ್ದು ಮೂರು ವರ್ಷದ ಬಾಲಕ ಸಾವು

Last Updated 23 ಜುಲೈ 2016, 11:46 IST
ಅಕ್ಷರ ಗಾತ್ರ

ಗ್ವಾಲಿಯರ್ (ಪಿಟಿಐ): ಕೊಳವೆ ಬಾವಿಗೆ ಬಿದ್ದು ಮೂರು ವರ್ಷದ ಅಭಯ್ ಪಚೌರಿ ಎಂಬ ಬಾಲಕ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಸುಲ್ತಾನ್‌ಪುರ ಖೇರಿಯಾ ಗ್ರಾಮದಲ್ಲಿ ನಡೆದಿದೆ.

ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಮನೆಗೆ ಬರುತ್ತಿದ್ದಾಗ ಅಭಯ್ ಕೊಳವೆ ಬಾವಿಗೆ ಬಿದ್ದಿದ್ದ. 150 ಅಡಿ ಆಳದ ಕೊಳವೆ ಬಾವಿಯಲ್ಲಿ 25 ಅಡಿ ಆಳದ ಅಂತರದಲ್ಲಿ ಸಿಲುಕಿಕೊಂಡಿದ್ದ. 22 ಗಂಟೆ ಕಾರ್ಯಾಚರಣೆ ಬಳಿಕ ಬಾಲಕನನ್ನು ಕೊಳವೆಬಾವಿಯಿಂದ ಮೇಲೆತ್ತಲಾಯಿತು ಎಂದು ಗ್ವಾಲಿಯರ್ ಎಸ್‌ಪಿ ಹರಿನಾರಾಯಣ ಮಿಶ್ರಾ ಹೇಳಿದ್ದಾರೆ.

ಕೂಡಲೇ ಅಭಯ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೈದ್ಯರು ಸಹ ಅದನ್ನು ದೃಢಪಡಿಸಿದ್ದಾರೆ. ಹಾವು ಕಚ್ಚಿ ಬಾಲಕ ಮೃತಪಟ್ಟಿದ್ದಾನೆ ಎಂಬ ಸುದ್ದಿ ಹಬ್ಬಿದ್ದು, ಅದು ಸುಳ್ಳು ಎಂದು ಗ್ವಾಲಿಯರ್ ಜಿಲ್ಲಾಧಿಕಾರಿ ಡಾ.ಸಂಜಯ್ ಗೋಯೆಲ್  ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಾಲಕನ ಕುಟುಂಬಕ್ಕೆ ₹ 1 ಲಕ್ಷ ನೀಡಲಾಗುವುದು. ಅಲ್ಲದೆ, ಕಾರ್ಯಾಚರಣೆ ವೇಳೆ ಕೊಳವೆಬಾವಿ ಇದ್ದ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದ್ದು, ಅದಕ್ಕೆ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT