ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಂಟಿ ಕ್ರಿಕೆಟ್‌ನಲ್ಲಿ ಮೆಕ್ಲಮ್‌ ರನ್‌ ಹೊಳೆ

Last Updated 4 ಜುಲೈ 2015, 8:34 IST
ಅಕ್ಷರ ಗಾತ್ರ

ಲಂಡನ್ (ಎಎಫ್‌ಪಿ): ಕೌಂಟಿ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ ತಂಡದ ನಾಯಕ ಬ್ರೆಂಡನ್ ಮೆಕ್ಲಮ್ ರನ್‌ ಹೊಳೆ ಹರಿಸಿ ದಾಖಲೆ ನಿರ್ಮಿಸಿದ್ದಾರೆ.

ನಾಟ್‌ವೆಸ್ಟ್‌ ಟ್ವೆಂಟಿ–20 ಬ್ಲಾಸ್ಟ್‌ ಟೂರ್ನಿಯಲ್ಲಿ ವಾವ್ರಿಕ್‌ಶೈರ್‌ ತಂಡದಲ್ಲಿ ಆಡುತ್ತಿರುವ ಮೆಕ್ಲಮ್‌, 64 ಎಸೆತಗಳಲ್ಲಿ 158 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಅದರಲ್ಲಿ 11 ಸಿಕ್ಸರ್ ಹಾಗೂ 13 ಬೌಂಡರಿ ಸೇರಿವೆ.

33 ವರ್ಷದ ಆಟಗಾರ ಮೆಕ್ಲಮ್‌, ಡೆರ್ಬಿಶೈರ್‌ ಬೌಲರ್‌ಗಳನ್ನು ಮನಸೋ ಇಚ್ಛೆ ದಂಡಿಸಿ ಕೇವಲ 42 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.

2008ರಲ್ಲಿ ಐಪಿಎಲ್‌ ಟೂರ್ನಿಯಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದಾಗೂ ಇಂಥದ್ದೇ ಸಾಧನೆ ತೋರಿದ್ದರು. ಆಗ ಅದಕ್ಕೆ 73 ಎಸೆತಗಳನ್ನು ತೆಗೆದುಕೊಂಡಿದ್ದರು. ಈ ಮೂಲಕ ತಮ್ಮದೇ ದಾಖಲೆಯನ್ನು ಸರಿಗಟ್ಟಿದರು.

ಅಲ್ಲದೇ, ಟ್ವೆಂಟಿ–20 ಟೂರ್ನಿಯಲ್ಲಿ ಎರಡನೇ ಗರಿಷ್ಠ ಸ್ಕೋರರ್‌ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ವೆಸ್ಟ್‌ ಇಂಡೀಸ್ ಆಟಗಾರ ಕ್ರಿಸ್‌ ಗೇಲ್‌ ಅಗ್ರಸ್ಥಾನದಲ್ಲಿದ್ದಾರೆ. ಗೇಲ್‌ 2013ರಲ್ಲಿ ನಡೆದ ಐಪಿಎಲ್‌ ಟೂರ್ನಿಯ ವೇಳೆ 175 ರನ್‌ಗಳಿಸಿದ್ದು ಈವರೆಗಿನ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ.

ಬರ್ಮಿಂಗ್‌ಹ್ಯಾಮ್‌ನ ಎಜ್‌ಬೆಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ವಾವ್ರಿಕ್‌ಶೈರ್‌ ತಂಡವು 60 ರನ್‌ಗಳ ಗೆಲುವು ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT