ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ಬೆಟ್ಟಿಂಗ್ ದಂಧೆ: ಬಂಧನ

Last Updated 23 ಮೇ 2016, 19:34 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ದಿನೇಶ್ ಜೈನ್ (49) ಎಂಬಾತನನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ  (ಸಿಸಿಬಿ) ಪೊಲೀಸರು, ₹ 2.24 ಲಕ್ಷ ನಗದು, ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

ರಾಜಾಜಿನಗರದ ದಿನೇಶ್, ಗಾಂಧಿನಗರದ ಕಾನಿಷ್ಕ ಹೋಟೆಲ್‌ನಲ್ಲಿ ತಂಗಿದ್ದ. ಆತ ಶನಿವಾರ (ಮೇ 21) ಕಿಂಗ್ಸ್‌ ಇಲೆವೆನ್ ಪಂಜಾಬ್‌ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ.

ಈ ಬಗ್ಗೆ ದೊರೆತ ಖಚಿತ ಮಾಹಿತಿಯಿಂದ ದಾಳಿ ನಡೆಸಿ ಆತನನ್ನು ಬಂಧಿಸಲಾಯಿತು. ದಿನೇಶ್, ಟಿ.ವಿಯಲ್ಲಿ ಪಂದ್ಯ ವೀಕ್ಷಿಸುತ್ತ ಮೊಬೈಲ್‌ಗಳ ಮೂಲಕ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.
ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT