ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಮನೋಭಾವ ಅಗತ್ಯ: ಕಂಬಳಿ

ಪದವಿಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ
Last Updated 17 ಸೆಪ್ಟೆಂಬರ್ 2014, 6:57 IST
ಅಕ್ಷರ ಗಾತ್ರ

ಕುಕನೂರು: ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಮನೋಭಾವ ಬೆಳೆಸಿಕೊಂಡು ರಾಜ್ಯ ಮಟ್ಟದಲ್ಲಿ ಮಿಂಚುವಂತಾಗಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಕಳಕಪ್ಪ ಕಂಬಳಿ ಹೇಳಿದರು.

ಇಲ್ಲಿನ ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಈರಪ್ಪ ಕುಡಗುಂಟಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಎರಡೂ ಅವಶ್ಯ. ಅವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಿರಂದ ಮಾನಸಿಕ ವಿಕಾಸವಾಗುತ್ತದೆ.  ಎಲ್ಲರಿಗೂ ಕ್ರೀಡೆ ಅಗತ್ಯ ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಾನಂದ ಕಡಪಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಇಲಾಖೆ ಬದ್ಧವಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಶೇಖರಪ್ಪ ವಾರದ, ಸದಸ್ಯೆ ರೇಣುಕಾ ಬಸವರಾಜ ಬೆದವಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ನಾಗಪ್ಪ ಕಲ್ಮನಿ, ಸಬ್‌ ಇನ್‌ಸ್ಪೆಕ್ಟರ ವಿಶ್ವನಾಥ ಹಿರೇಗೌಡ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಸ್ವಾಮಿ, ಪ್ರಾಚಾರ್ಯರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಬಿ.ರಡ್ಡೇರ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಶರಣಪ್ಪ ಮುದ್ಲಾಪೂರ, ಯುವಜನ ಸೇವೆ ಮತ್ತು ಕ್ರೀಡಾ ಸಬಲೀಕರಣ ಇಲಾಖೆ ಹನಮಂತಪ್ಪ ವಗ್ಯಾನವರ, ಉಮೇಶ ಕಂಬಳಿ, ಸಂಸ್ಥೆ ಸಹಕಾರ್ಯದರ್ಶಿ ಜಿ.ವಿ.ಜಹಗೀರದಾರ್‌, ಡಿ.ಆರ್‌.­ಕುಲಕರ್ಣಿ, ಪ್ರಾಚಾರ್ಯ ಕೆ.ಆರ್‌.­ಕುಲಕರ್ಣಿ, ಉಪ ಪ್ರಾಚಾರ್ಯ ಎಸ್‌.ಎಲ್‌.ಲಮಾಣಿ, ಯಲಬುರ್ಗಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಲ್‌.ಜಿ.ರಾಟಿಮನಿ ಇದ್ದರು.

ಜಿಲ್ಲೆಯ ನಾಲ್ಕೂ ತಾಲ್ಲೂಕುಗಳ ವಿವಿಧ ಕಾಲೇಜುಗಳಿಂದ ಬಂದಿದ್ದ ನೂರಾರು ಕ್ರೀಡಾಪಟುಗಳು, ಪ್ರಾಚಾರ್ಯರು, ಉಪನ್ಯಾಸಕರು, ದೈಹಿಕ ಶಿಕ್ಷಣ ಶಿಕ್ಷಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಎಚ್‌.ಬಿ.ಹಳೆಗೌಡ್ರ, ಎಸ್‌.ಬಿ.ಜೋಷಿ, ವೈ.ಎಸ್‌.ನೀರಲಕೇರಿ, ಆರ್‌.ಎಂ.ದೇವರಡ್ಡಿ, ಚಂದ್ರಶೇಖರ ತೋಟದ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT