ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆ: ಸಂಕ್ಷಿಪ್ತ ಸುದ್ದಿ

Last Updated 18 ಡಿಸೆಂಬರ್ 2014, 20:01 IST
ಅಕ್ಷರ ಗಾತ್ರ

ಓಟಕ್ಕೆ ಅನುಮತಿ ಇಲ್ಲ
ಬೆಂಗಳೂರು:
ರೋಟರಿ ಬೆಂಗಳೂರು ಐಟಿ ಕಾರಿಡಾರ್‌ ಆಯೋಜಿಸಿದ್ದ ಬೆಂಗಳೂರು ಮಿಡ್‌ನೈಟ್‌ ಓಟ ನಡೆಸಲು ಭಾರತ ಅಥ್ಲೆಟಿಕ್‌ ಫೆಡರೇಷನ್‌ ಅನುಮತಿ ನೀಡಿಲ್ಲ. ಆದ್ದರಿಂದ ಈ ಸ್ಪರ್ಧೆ ನಡೆಯುವ ಬಗ್ಗೆ ಈಗ ಅನುಮಾನಗಳು ಹುಟ್ಟಿಕೊಂಡಿವೆ.

‘ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಬೇಕಾದರೆ ಅಥ್ಲೆಟಿಕ್‌ ಫೆಡರೇಷನ್‌ ಅನುಮತಿ ಪಡೆಯುವುದು ಕಡ್ಡಾಯ. ಆದರೆ, ಐಟಿ ಕಾರಿಡಾರ್‌ ಯಾರ ಅನುಮತಿಯೂ ಪಡೆದಿಲ್ಲ’ ಎಂದು ಕರ್ನಾಟಕ ಅಮೆಚೂರ್‌ ಅಥ್ಲೆಟಿಕ್‌ ಸಂಸ್ಥೆ ತಿಳಿಸಿದೆ.

‘ಓಟದಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳ ಸ್ಪರ್ಧಿಗಳು ಭಾಗವಹಿಸಲು ಆಸಕ್ತಿ ತೋರಿದ್ದಾರೆ’ ಎಂದು ಸಂಘಟಕರು ಹೇಳಿದ್ದಾರೆ. ಮಿಲ್ಖಾ ಸಿಂಗ್‌ ಅವರು  ರಾಯಭಾರಿಯಾಗಿದ್ದಾರೆ.

ಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ
ನವದೆಹಲಿ (ಐಎಎನ್‌ಎಸ್‌)
: ನ್ಯಾಯಾಲಯ ದಲ್ಲಿರುವ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವ ತನಕ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಲು ಅಥ್ಲೀಟ್‌ ದ್ಯುತಿ ಚಾಂದ್‌ ಅವರಿಗೆ ಅವಕಾಶ ನೀಡಲಾಗಿದೆ.

ಅಂತರರಾಷ್ಟ್ರೀಯ ಅಮೆಚೂರ್‌ ಅಥ್ಲೆಟಿಕ್ ಫೆಡರೇಷನ್‌ ಹಾಗೂ ಭಾರತ ಅಥ್ಲೆಟಿಕ್‌ ಫೆಡರೇಷನ್‌ ದ್ಯುತಿ ಅವರನ್ನು  ಅನರ್ಹಗೊಳಿಸಿದೆ. ಇದನ್ನು ಪ್ರಶ್ನಿಸಿ ಅವರು ಮಧ್ಯಸ್ಥಿಕೆ ನ್ಯಾಯಾಲಯ ದಲ್ಲಿ ದೂರು ದಾಖಲಿಸಿದ್ದಾರೆ.

ಸ್ಕ್ವಾಷ್‌: ದೀಪಿಕಾಗೆ ಸೋಲು
ಕೈರೊ (ಪಿಟಿಐ)
: ಭಾರತದ ದೀಪಿಕಾ ಪಳ್ಳಿಕಲ್‌ ಮತ್ತು ಜೋಷ್ನಾ ಚಿಣ್ಣಪ್ಪ ಇಲ್ಲಿ ನಡೆಯುತ್ತಿರುವ ವಿಶ್ವ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ನಿರಾಸೆ ಅನುಭವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT