ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಹೂಡಿಕೆಗೆ ಆದ್ಯತೆ ಅಗತ್ಯ

Last Updated 25 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ದೇಶದಲ್ಲಿ ಖಾಸಗಿ ಹೂಡಿಕೆಗೆ ಇರುವ ತೊಡಕು­ಗಳನ್ನು ನಿವಾರಿಸಿದಲ್ಲಿ ಉತ್ತಮ ಆರ್ಥಿಕ ಪ್ರಗತಿ ದರ ಸಾಧ್ಯ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣಿಯನ್‌ ಅಭಿ­ಪ್ರಾಯ­­ಪಟ್ಟಿದ್ದಾರೆ.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಸಭೆಯಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಮತ್ತು ವಿದ್ಯುತ್‌ ಕೊರತೆ ಹಾಗೂ ಹಲವು ನಿಯಮಗಳನ್ನು ಅನುಸರಿಸ­ಬೇಕಿರುವು­ದರಿಂದ  ಖಾಸಗಿ ಹೂಡಿಕೆಗೆ ಅಡ್ಡಿಯಾ­ಗಿದೆ. ಉತ್ತಮ ಆಡಳಿತ, ಆಸ್ತಿ ಹಕ್ಕು ರಕ್ಷಣೆ, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ದೇಶದ ಆರ್ಥಿಕತೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ನಡೆಯಬೇಕಿದೆ ಎಂದಿದ್ದಾರೆ.

ದೇಶದಲ್ಲಿ ಖಾಸಗಿ ಹೂಡಿಕೆಗೆ ಬಹಳಷ್ಟು ನಿಯಮಗಳನ್ನು ಅನುಸರಿಸ­ಬೇಕು. ಇದರಿಂದ ಉದ್ಯೋಗ ಸೃಷ್ಟಿ, ಖಾಸಗಿ ಕ್ಷೇತ್ರದ ವೃದ್ಧಿಗೆ ಹಿನ್ನಡೆ­ಯಾಗಿದೆ. ಈ ಸಮಸ್ಯೆಗಳನ್ನು ನಿವಾರಿಸು­ವುದು ದೇಶದ ಮುಂದಿರುವ ಬಹು ದೊಡ್ಡ ಸವಾಲಾಗಿವೆ ಎಂದು ಅವರು ತಿಳಿಸಿದ್ದಾರೆ.ಕಲ್ಲಿದ್ದಲು ಮತ್ತು ವಿದ್ಯುತ್‌ ಕೊರತೆ­ಯಿಂದಾಗಿ ಹಲವು ಯೋಜನೆಗಳು ಸ್ಥಗಿತವಾಗಿವೆ. ಈ ಸಮಸ್ಯೆಗಳನ್ನು ಬಗೆಹರಿ­ಸಿದಲ್ಲಿ  ಖಾಸಗಿ ಹೂಡಿಕೆಗೆ ಮತ್ತು ಅಭಿವೃದ್ಧಿಗೆ ನೆರವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿ­ಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು  ಉದ್ಯೋಗ ಸೃಷ್ಟಿಗಾಗಿ ಜಿಡಿಪಿ ದರ ಶೇ 5ರಷ್ಟಿದ್ದರೆ ಸಾಲದು. ಶೇ 7.5 ರಿಂದ ಶೇ 8ರಷ್ಟಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT