ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ: ಮಹಾ ಸಮಿತಿ ಪುನರ್ ರಚನೆ

Last Updated 6 ಮಾರ್ಚ್ 2015, 10:29 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): ಕರ್ನಾಟಕದ ಜತೆಗಿನ ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಉನ್ನತಮಟ್ಟದ ಅಧಿಕಾರ ಸಮಿತಿಯನ್ನು ಪುನರ್ ರಚಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನೇತೃತ್ವದ ಎಂಟು ಮಂದಿ ಸದಸ್ಯರ ಸಮಿತಿಯಲ್ಲಿ ಎನ್ ಸಿಪಿ ಮುಖಂಡ ಶರದ್ ಪವಾರ್ ಮತ್ತು ರಾಜ್ಯ ಬಿಜೆಪಿ, ಶಿವ ಸೇನೆಯ ಹಿರಿಯ ಸಚಿವರು ಇದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕರು ಸಹ ಸಮಿತಿಯಲ್ಲಿದ್ದಾರೆ. ಸಮಿತಿ ಪುನರ್ ರಚನೆ ಕುರಿತು ಸರರ್ಕಾರ ಈಚೆಗೆ ನಿರ್ಣಯ ಕೈಗೊಂಡಿದೆ.

ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಬೆಳಗಾವಿ ಮತ್ತು ಗಡಿಯಲ್ಲಿ ಇತರ ಐದು ಸ್ಥಳಗಳು ತಮ್ಮ ರಾಜ್ಯಕ್ಕೆ ಸೇರಬೇಕಾದವು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಸುಪ್ರೀಂ ಕೋರ್ಟ್ ನಲ್ಲಿ ಮಹಾರಾಷ್ಟ್ರ ಸರ್ಕಾರ ದಾವೆ ಹೂಡಿದ್ದು, ಪ್ರಕರಣ ಇತ್ಯರ್ಥವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT