ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಹಬ್ಬಕ್ಕೆ 1,000 ಹೆಚ್ಚುವರಿ ಬಸ್‌

Last Updated 26 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌­ಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಇದೇ 27 ಹಾಗೂ 28ರಂದು ನಗರದಿಂದ ವಿವಿಧ ಭಾಗಗಳಿಗೆ 1,000ಕ್ಕೂ ಅಧಿಕ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಿದೆ.

ಮೆಜೆಸ್ಟಿಕ್‌ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರ­ವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರ­ವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಕಾರ್ಯಾಚರಣೆ ಮಾಡಲಾಗುವುದು.

ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ,  ತಿರುಪತಿ, ವಿಜಯ­ವಾಡ, ಹೈದರಾಬಾದ್ ಮತ್ತಿತರ ಕಡೆಗಳಿಗೆ ಶಾಂತಿ­-ನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ವಿಜಯನಗರ, ಜೆ.ಪಿ.ನಗರ, ಜಯನಗರ ೪ನೇ ಬ್ಲಾಕ್ ಮತ್ತು ೯ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ ೧೮ನೇ ಅಡ್ಡ ರಸ್ತೆ, ಕೆಂಗೇರಿಯ ಉಪನಗರ ಮತ್ತಿತರ ಕಡೆಗಳಿಂದ ಪ್ರಯಾ­ಣಿಕರ ಒತ್ತಡಕ್ಕನುಗುಣವಾಗಿ  ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರ­ನಾಡು, ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು.

ವಾಯವ್ಯ ಕರ್ನಾಟಕದ ಕಡೆಗೆ (ಹುಬ್ಬಳ್ಳಿ, ಧಾರ­ವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರ­ವಾರ ಇತ್ಯಾದಿ) ಹಾಗೂ ಈಶಾನ್ಯ ಕರ್ನಾಟಕದ ಕಡೆಗೆ (ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಇತ್ಯಾದಿ) ವಿಶೇಷ ಸಾರಿಗೆಗಳನ್ನು ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಈ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿ­­ರಿ­ಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗು­ವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿ­ಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

www.ksrtc.in ವೆಬ್‌ಸೈಟ್‌ ಮುಖಾಂತರ ಇ–ಟಿಕೆಟ್‌ ಬುಕ್ಕಿಂಗ್‌  ಮಾಡಬಹುದು. ಪ್ರಯಾಣಿಕರು ಬೆಂಗಳೂರಿನ ೧೭೩, ಮೈಸೂರಿನ ೧೪, ಮಂಗಳೂರಿನ ೫೪ ಹಾಗೂ ರಾಜ್ಯದ ಇತರ ಕಡೆಗ­ಳಲ್ಲಿ ಇರುವ ೨೩೦ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇಕಡ ೫ ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ ೧೦ ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT